
ಬೆಂಗಳೂರಿನ ಕೆಪಿ ಅಗ್ರಹಾರ ಪೊಲೀಸ್ ಇನ್ಸ್ ಪೆಕ್ಟರ್ ಲೋಕಾಯುಕ್ತ ಟ್ರ್ಯಾಪ್ ಗೆ ಸಿಲುಕಿದ್ದಾರೆ. ಕೆಪಿ ಅಗ್ರಹಾರ ಪೊಲೀಸ್ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ಲಂಚದ ಹಣ ಪಡೆದುಕೊಳ್ಳುವ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಚೀಟಿ ವ್ಯವಹಾರ ಕೇಸ್ ಸಂಬಂಧ ಹಣ ಪಡೆಯುವಾಗ ಲಾಕ್ ಆಗಿದ್ದಾರೆ. ವ್ಯಕ್ತಿಯನ್ನ ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು, 4 ಲಕ್ಷಕ್ಕೆ ಡಿಮ್ಯಾಂಡ್ ಮಾಡಿ 4 ಲಕ್ಷ ಹಣ ಪಡೆಯುತ್ತಿದ್ದ ವೇಳೆ ಇನ್ಸ್ ಪೆಕ್ಟರ್ ಅವರನ್ನ ಲೋಕಾಯುಕ್ತ ಪೊಲೀಸರು ಖೆಡ್ಡಾಗೆ ಕೆಡವಿದ್ದಾರೆ.
ಸಿರಸಿ ಸರ್ಕಲ್ ಬಳಿಯ CAR ಗ್ರೌಂಡ್ ಬಳಿ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ ಪಿ ಶಿವಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.