Categories: ಗದಗ

40% ಭ್ರಷ್ಟಾಚಾರ ಪ್ರಕರಣದ ತನಿಖೆ- ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ

ಕ.ರಾ.ರ.ಸಾ ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ ಎಂದು ಕೆಲ ಚಾಲಕರಿಂದ ದೂರು ಕೇಳಿಬರುತ್ತಿದ್ದು, ಡ್ಯೂಟಿ ಹಾಕಲು ಲಂಚ ಕೇಳಿದ ಪ್ರಕರಣವನ್ನೂ ತನಿಖೆ ಮಾಡಿಸಲಾಗುವುದು. ಈಗಾಗಲೇ ನಾವು ಹಿಂದಿನ ಸರ್ಕಾರದ 40% ಭ್ರಷ್ಟಾಚಾರ ಪ್ರಕರಣವನ್ನು ತನಿಖೆ ಮಾಡಿಸುತ್ತಿದ್ದೇವೆ. ಆರೋಪಗಳು ಸಾಬೀತಾದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಯಾವುದೇ ಭ್ರಷ್ಟಾಚಾರದ ಪ್ರಕರಣಗಳಿದ್ದರೆ ಅದನ್ನು ಸುಮ್ಮನೆ ನೋಡುತ್ತಾ ಕುಳಿತುಕೊಳ್ಳುವುದಿಲ್ಲ. ತನಿಖೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಕಾಂತರಾಜು ವರದಿ ಇನ್ನೂ ಸಲ್ಲಿಸಿಲ್ಲವಾದ್ದರಿಂದ ಸ್ವೀಕಾರ ಮಾಡುವುದು ಹೇಗೆ? ವರದಿ ಕೊಟ್ಟ ಮೇಲೆ ಸ್ವೀಕಾರ ಮಾಡುವ ಪ್ರಶ್ನೆ ಉದ್ಭವವಾಗುತ್ತದೆ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ವರದಿ ಕೊಟ್ಟಿಲ್ಲ. ಕೊಡಲು ಬಂದಾಗ ವಿಚಾರ ಮಾಡುತ್ತೇವೆ. ವರದಿ ವೈಜ್ಞಾನಿಕವಲ್ಲ ಎಂದು ಕೆಲವರು ವಿಚಾರ ಮಾಡುತ್ತಿದ್ದು, ವರದಿ ಬರದೆ, ಏನಿದೆ ಎಂದು ತಿಳಿಯದೇ ಊಹಾಪೋಹದ ಮೇಲೆ ನಿರ್ಧಾರ ಮಾಡುತ್ತಿದ್ದಾರೆ. ಮೊದಲು ವರದಿ ಬರಲಿ ನೋಡೋಣ ಎಂದು ಹೇಳಿದರು.

ಶಕ್ತಿ ಯೋಜನೆಗೆ ಯೋಜನೆಗೆ ಎಷ್ಟು ಹಣ ಖರ್ಚಾಗುತ್ತದೆಯೋ ಅಷ್ಟು ಹಣ ಒದಗಿಸಲಾಗುವುದು. ಈ ಯೋಜನೆಗೆ ಪ್ರತಿ ವರ್ಷ ವೆಚ್ಚವಾಗುವ ಹಣವನ್ನು ಕೆ.ಎಸ್.ಆರ್.ಟಿ. ಸಿ ಗೆ ಸರ್ಕಾರದಿಂದ ತುಂಬಿ ಕೊಡಲಾಗುವುದು. ಬಸ್ಸುಗಳ ದುರಸ್ತಿ ಹಾಗೂ ಹೊಸ ಬಸ್ಸುಗಳ ಖರೀದಿಯೂ ಆಗಲಿದೆ. ರಿಪೇರಿಗೆ ಅನುದಾನವನ್ನು ಒದಗಿಸಲಾಗಿದೆ. ಅನುದಾನವಿಲ್ಲ ಎಂದಿರುವ ಅಧಿಕಾರಿಗಳ ಹೆಸರು ನೀಡಿದರೆ ಪರಿಶೀಲನೆ ನಡೆಸಲಾಗುವುದು. ನಮ್ಮ ಸರ್ಕಾರದಲ್ಲಿ ಘೋಷಿಸಿರುವ ಯೋಜನೆಗಳಿಗೆ ಅನುದಾನದ ಕೊರತೆ ಇಲ್ಲ. ಅಭಿವೃದ್ಧಿ ಕೆಲಸಗಳು ನಿಂತಿಲ್ಲ ಎಂದರು.

ನವೆಂಬರ್ ಅಂತ್ಯದವರೆಗೆ ಹಿಂದಿನ ಸರ್ಕಾರ  70,814 ಕೋಟಿ ರೂ.ಗಳನ್ನು ಅಭಿವೃದ್ಧಿಗೆ ಖರ್ಚು ಮಾಡಿತ್ತು. ನಮ್ಮ ಸರ್ಕಾರ 73,928 ಕೋಟಿ ರೂ.ಗಳನ್ನು ವೆಚ್ಚ ಮಾಡಿದೆ. ಹಣವನ್ನು ಖರ್ಚು ಮಾಡಿಲ್ಲ ಎನ್ನುವುದು ಸುಳ್ಳು. 3,000 ಕೋಟಿ ರೂ.ಗಳಷ್ಟು ಮೊತ್ತವನ್ನು ಹೆಚ್ಚು ವೆಚ್ಚ ಮಾಡಿದ್ದೇವೆ. ನಾವು ಸರ್ಕಾರ ರೂಪಿಸಿದ್ದು ಮೇ 20 ಕ್ಕೆ, ಬಜೆಟ್ ಮಂಡಿಸಿದ್ದು ಜುಲೈನಲ್ಲಿ, ಅದು ಜಾರಿಯಾಗಿದ್ದು ಆಗಸ್ಟ್ 1 ರಿಂದ. 4 ಗ್ಯಾರಂಟಿ ಗಳನ್ನು ಜಾರಿ ಮಾಡಿದ್ದು, 5 ನೇ ಗ್ಯಾರಂಟಿ ಜನವರಿಯಲ್ಲಿ ಪ್ರಾರಂಭವಾಗಲಿದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ ಎಂದು ತಿಳಿಸಿದರು.

ಇಡೀ ದೇಶದಲ್ಲಿ ಕೊರೊನಾ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರಿಗೆ ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ ಎಂದರು.

ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ಯಾವ ತನಿಖೆಗೆ ಬೇಕಾದರೂ ವಹಿಸಲು ಸಿದ್ಧ. ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ. ಹಾಗಾಗಿ ಬೇರೆ ಪ್ರಶ್ನೆ ಉದ್ಭವಿಸದು ಎಂದು ಹೇಳಿದರು.

ಕ್ಯಾಶ್ ಕಾರ್ಡ್  ಬ್ಯಾಂಕ್ ಸೊಸೈಟಿಗಳಲ್ಲಿ ರೈತರಿಗೆ ನೀಡಿರುವ ಸಾಲದ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದರು.

ಉನ್ನತ ಶಿಕ್ಷಣ ಮತ್ತು ಪ್ರಾಥಮಿಕ ಶಿಕ್ಷಣ ಇಲಾಖೆಗಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಒಂದು ಸೂತ್ರ ರೂಪಿಸುತ್ತಿವೆ. ಈ ಸಂಬಂಧ ಸಭೆ ನಡೆಸಿದ ನಂತರ ಪರಿಹಾರ ಸೂತ್ರವನ್ನು ಸರ್ಕಾರಕ್ಕೆ ನೀಡುತ್ತಾರೆ. ತದನಂತರ ಸರ್ಕಾರ ಪರಿಶೀಲನೆ ನಡೆಸಲಿದೆ. ಈ ಕೆಲಸವನ್ನು ತ್ವರಿತವಾಗಿ ನಡೆಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

7 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

8 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

16 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

21 hours ago

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

1 day ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

1 day ago