ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ “ಮಹಾ ನಿರ್ಧಾರ” ಸಮಾವೇಶವನ್ನು ಉದ್ಘಾಟಿಸಿ, ಮಾತನಾಡಿದ ಅವರು, ಬರುವ ಲೋಕಸಭೇಯಲ್ಲಿ ಎಲ್ಲರೂ ಒಗ್ಗಟ್ಟಾಗಿ, ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ ಬಿಜೆಪಿಯನ್ನು ಹೋಗಲಾಡಿಸಲು ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕು.
40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿರಲಿಲ್ಲ. ಚುನಾವಣೆಯ ಸಂದರ್ಭದಲ್ಲಿ ವಿದೇಶದಲ್ಲಿರುವ ಕಪ್ಪುಹಣವನ್ನು ತಂದು, ದೇಶದ ಪ್ರತಿಯೊಬ್ಬರಿಗೂ 15 ಲಕ್ಷ ನೀಡುತ್ತೇವೆಂಬ ಅವರ ಮಾತು ಸುಳ್ಳಾಯಿತು. 9 ವರ್ಷದಲ್ಲಿ 18 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು, ಹೊಸ ಉದ್ಯೋಗ ಸೃಷ್ಟಿಸುವ ಬದಲು ಇರುವ ಉದ್ಯೋಗವನ್ನು ಯುವಕರು ಕಳೆದುಕೊಳ್ಳುತ್ತಿದ್ದಾರೆ. ಅವರು ಅಚ್ಛೇ ದಿನ್ ಆಯೇಗಾ ಎಂಬ ಮಾತು ಹೇಳಿದ್ದರು. ಇಂದು ಪೆಟ್ರೋಲ್, ಡೀಸೆಲ್, ಗ್ಯಾಸ್, ಗೊಬ್ಬರ, ಕಬ್ಬಿಣ, ಸಿಮೆಂಟು, ಆಹಾರ ಪದಾರ್ಥಗಳೂ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಾಗಿದೆ. ನರೇಂದ್ರ ಮೋದಿಯವರು ನ ಖಾವೋಂಗ, ನ ಖಾನೆ ದೂಂಗ ಎಂದರು. ಆದರೆ ಕರ್ನಾಟಕದಲ್ಲಿ 40 % ಭ್ರಷ್ಟಾಚಾರ ರಾರಾಜಿಸಿತು. ಆ ಮಾತು ಏನಾಯಿತು.
ಕೋಮುವಾದಿ ಭಾರತೀಯ ಜನತಾ ಪಕ್ಷ ಸಂವಿಧಾನವನ್ನು ವಿರೋಧಿಸುತ್ತದೆ. ಸಾರ್ವಕರ್, ಗೋಲ್ವಾಕರ್ ಅವರು ಸಂವಿಧಾನವನ್ನು ಅಂದೇ ವಿರೋಧಿಸಿದ್ದರು. ಧರ್ಮಗಳ ನಡುವೆ ಸಂಘರ್ಷಗಳಿಂದ ದೀನದಲಿತರು, ಅಲ್ಪಸಂಖ್ಯಾತರು ಆತಂಕದಲ್ಲಿ ಬದುಕುವಂತಾಗಿದೆ. ಸಂಘ ಪರಿವಾರದವರು ಈಕೆಲಸವನ್ನು ಮಾಡುತ್ತಿದ್ದಾರೆ. ಭಾರತದಲ್ಲಿ ಹಾಗೂ ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ ಆಡಳಿತದಲ್ಲಿದ್ದು, ಅವರನ್ನು ಕಿತ್ತೊಗೆಯಬೇಕಾದ ಜವಾಬ್ದಾರಿ ಕಾಂಗ್ರೆಸ್‍ನ ಮೇಲಿದೆ. ಪ್ರಜಾತಂತ್ರದ ರಕ್ಷಣೆಗಾಗಿ ಮತ್ತೊಂದು ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ನಾವೆಲ್ಲರೂ ಸಿದ್ದಗೊಳ್ಳಬೇಕಿದೆ.
ಆಪರೇಷನ್ ಕಮಲ ಮೂಲಕ 2008 ಹಾಗೂ 2018 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿತು. ಭಾಜಪ ಎಂದರೆ ಭ್ರಷ್ಟಾಚಾರ. ಕರ್ನಾಟಕದಲ್ಲಿ ಗುತ್ತಿಗೆದಾರರ ಸಂಘ 40% ಭ್ರಷ್ಟಾಚಾರದ ಸರ್ಕಾರ ಎಂದು ಕರೆಯಿತು. ಭಾಜಪ ಎಂದಿಗೂ ಬಡವರ ಪರ ಕೆಲಸವನ್ನು ಮಾಡಿಲ್ಲ.
ಕಾಂಗ್ರೆಸ್ ಪಕ್ಷ ಕರ್ನಾಟಕದ ಜನರಿಗೆ 5 ಗ್ಯಾರೆಂಟಿಗಳನ್ನು ನೀಡಿದ್ದು, ಅಧಿಕಾರಕ್ಕೆ ಬಂದ ದಿನವೇ 5 ಗ್ಯಾರೆಂಟಿಗಳನ್ನು ಜಾರಿಗೊಳಿಸುವ ತೀರ್ಮಾನವನ್ನು ಮಾಡಲಾಯಿತು. ರಾಜ್ಯದೊಳಗೆ ಎಲ್ಲ ಮಹಿಳೆಯರು ಸರ್ಕಾರಿ ಬಸ್‍ನಲ್ಲಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದೆ. ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ. ನೀಡುವ ಗೃಹಜ್ಯೋತಿ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಅನ್ನಭಾಗ್ಯ ಯೋಜನೆಯಡಿ ಏಳು ಕೆಜಿ ಅಕ್ಕಿಯನ್ನು ನೀಡಲಾಗುತ್ತಿತ್ತು. ಈ ಬಾರಿಯೂ ರಾಜ್ಯದ ಬಿಪಿಎಲ್ ಕಾರ್ಡ್ ಹಾಗೂ ಅಂತ್ಯೋದಯ ಕಾರ್ಡ್‍ದಾರರಿಗೆ 10 ಕೆಜಿ ಅಕ್ಕಿಯನ್ನು ನೀಡುವ ಅನ್ನಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಿದೆ. ಅನ್ನಭಾಗ್ಯ ಯೋಜನೆಗೆ ಎಫ್ ಸಿ ಐ ಅಕ್ಕಿಯನ್ನು ನೀಡುವುದಾಗಿ ಮೊದಲು ಒಪ್ಪಿತ್ತು, ನಂತರ ಕೇಂದ್ರ ಸರ್ಕಾರದ ನೀತಿಯಿಂದ ಕಾಂಗ್ರೆಸ್ ಸರ್ಕಾರಕ್ಕೆ ಅಕ್ಕಿ ನೀಡಬಾರದು ಎಂದು ಸೂಚನೆ ನೀಡಿತು. ಅಕ್ಕಿ ದಾಸ್ತಾನಿದ್ದರೂ ಅಕ್ಕಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣವನ್ನು ಮಾಡಿದೆ. ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದರೂ , ಕರ್ನಾಟಕಕ್ಕೆ ಅಕ್ಕಿ ನೀಡಲು ಒಪ್ಪುತ್ತಿಲ್ಲ. ಈ ಮೂಲಕ ಭಾರತೀಯ ಜನತಾ ಪಕ್ಷದವರು ಬಡವರ ವಿರೋಧಿಗಳು ಎಂಬುದು ನಿರೂಪಿತವಾಗಿದೆ.
ಕರ್ನಾಟಕದಲ್ಲಿರುವ ನಿರುದ್ಯೋಗಿ ಪದವೀಧರ ಯುವಕರಿಗೆ ತಿಂಗಳಿಗೆ 3 ಸಾವಿರ ರೂ ಹಾಗೂ ಡಿಪ್ಲೊಮಾ ಪದವೀಧರರಿಗೆ 1,500 ರೂ.ಗಳನ್ನು 24 ತಿಂಗಳವರೆಗೆ ನೀಡುವ ಯುವನಿಧಿ ಯೋಜನೆಯನ್ನು ಜಾರಿಗೊಳಿಸಲಾಗುವುದು. ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ಪ್ರಧಾನಿ ಮೋದಿಯವರು ಹಾಗೂ ಕೇಂದ್ರ ಮಂತ್ರಿಮಂಡಲದ ಅನೇಕರು ರಾಜ್ಯಕ್ಕೆ ಭೇಟಿ ನೀಡಿದರು. ಆದರೂ ಕರ್ನಾಟಕದಲ್ಲಿ ಭಾಜಪ ಸೋತಿರುವುದು ನರೇಂದ್ರ ಮೋದಿಯವರ ಜನಪ್ರಿಯತೆ ಮಸುಕ್ಕಾಗುತ್ತಿದೆ ಎಂಬುದನ್ನು ಸಂಕೇತಿಸುತ್ತಿದೆ. ರಾಜ್ಯದ ಭಾಜಪ ಭ್ರಷ್ಟದಾಚಾರದಲ್ಲಿ ಮುಳುಗಿ, ಜನವಿರೋಧಿಯಾಗಿತ್ತು. ಕೇವಲ ಪ್ರಧಾನಿ ಮೋದಿಯವರನ್ನು ನಂಬಿ ಚುನಾವಣೆ ಗೆಲ್ಲಬಹುದೆಂಬ ಭಾಜಪದ ನಂಬಿಕೆ ಹುಸಿಯಾಯಿತು ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…