40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಓತಿಘಟ್ಟ ಗ್ರಾಮದ ಕೇಶವಮೂರ್ತಿ ಎಂಬುವವರು ತಮ್ಮ ಎರಿಟಿಗಾ ಕಾರನ್ನು ಕಳೆದ ಎರಡು ವರ್ಷಗಳಿಂದ ಶಿವಮೊಗ್ಗ ವಿಶೇಷ ಭೂ ಸ್ವಾಧೀನಾಧಿಕಾರಿ (ಎನ್.ಹೆಚ್-206) ಕಛೇರಿಗೆ ಬಾಡಿಗೆಗೆ ನೀಡಿದ್ದರು. 2025ರ ನವೆಂಬರ್ ತಿಂಗಳ ಬಾಡಿಗೆ ಹಣದ ಚೆಕ್ ನೀಡಲು ಸಿದ್ದಲಿಂಗ ರೆಡ್ಡಿ ಅವರು 40,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕೇಶವಮೂರ್ತಿ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಫೆ.14ರ ಸಂಜೆ ಸಿದ್ದಲಿಂಗ ರೆಡ್ಡಿ ಅವರ ಸೂಚನೆಯಂತೆ ಹೊಳಲೂರು ನಾಡಕಛೇರಿಯ ಗ್ರಾಮ ಸಹಾಯಕ ರಾಜೇಶ್, ಶಿವಮೊಗ್ಗದ ನೆಹರೂ ಸ್ಟೇಡಿಯಂ ಬಳಿ ಕೇಶವಮೂರ್ತಿ ಅವರಿಂದ 40,000 ರೂ. ಹಣ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಚಂದ್ರಶೇಖರ್.ಬಿ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಪೊಲೀಸ್ ನಿರೀಕ್ಷಕರಾದ ಕೆ.ಪಿ.ರುದ್ರೇಶ್, ಗುರುರಾಜ್ ಮೈಲಾರ್, ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿ ಯೋಗೇಶ್.ಜಿ.ಸಿ, ಟೀಕಪ್ಪ, ಸುರೇಂದ್ರ.ಹೆಚ್.ಸಿ, ಬಿ.ಟಿ.ಚನ್ನೇಶ್, ದೇವರಾಜ್, ಅರುಣ್ ಕುಮಾರ್.ಯು.ಬಿ, ಪ್ರಕಾಶ್ ಬಾರಿಮರದ್, ಆದರ್ಶ್, ಚಂದ್ರಿಬಾಯಿ, ಪ್ರದೀಪ್, ಗೋಪಿ, ಚೇತನ್ ಮತ್ತು ಆನಂದ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Ramesh Babu

Journalist

Recent Posts

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

1 hour ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

6 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

10 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago