ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು ಗ್ರಾಮ ಸಹಾಯಕ ರಾಜೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಓತಿಘಟ್ಟ ಗ್ರಾಮದ ಕೇಶವಮೂರ್ತಿ ಎಂಬುವವರು ತಮ್ಮ ಎರಿಟಿಗಾ ಕಾರನ್ನು ಕಳೆದ ಎರಡು ವರ್ಷಗಳಿಂದ ಶಿವಮೊಗ್ಗ ವಿಶೇಷ ಭೂ ಸ್ವಾಧೀನಾಧಿಕಾರಿ (ಎನ್.ಹೆಚ್-206) ಕಛೇರಿಗೆ ಬಾಡಿಗೆಗೆ ನೀಡಿದ್ದರು. 2025ರ ನವೆಂಬರ್ ತಿಂಗಳ ಬಾಡಿಗೆ ಹಣದ ಚೆಕ್ ನೀಡಲು ಸಿದ್ದಲಿಂಗ ರೆಡ್ಡಿ ಅವರು 40,000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಕೇಶವಮೂರ್ತಿ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.
ಫೆ.14ರ ಸಂಜೆ ಸಿದ್ದಲಿಂಗ ರೆಡ್ಡಿ ಅವರ ಸೂಚನೆಯಂತೆ ಹೊಳಲೂರು ನಾಡಕಛೇರಿಯ ಗ್ರಾಮ ಸಹಾಯಕ ರಾಜೇಶ್, ಶಿವಮೊಗ್ಗದ ನೆಹರೂ ಸ್ಟೇಡಿಯಂ ಬಳಿ ಕೇಶವಮೂರ್ತಿ ಅವರಿಂದ 40,000 ರೂ. ಹಣ ಪಡೆಯುತ್ತಿದ್ದರು. ಈ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್.ಕೌಲಾಪೂರೆ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಚಂದ್ರಶೇಖರ್.ಬಿ.ಪಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.
ಪೊಲೀಸ್ ನಿರೀಕ್ಷಕರಾದ ಕೆ.ಪಿ.ರುದ್ರೇಶ್, ಗುರುರಾಜ್ ಮೈಲಾರ್, ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿ ಯೋಗೇಶ್.ಜಿ.ಸಿ, ಟೀಕಪ್ಪ, ಸುರೇಂದ್ರ.ಹೆಚ್.ಸಿ, ಬಿ.ಟಿ.ಚನ್ನೇಶ್, ದೇವರಾಜ್, ಅರುಣ್ ಕುಮಾರ್.ಯು.ಬಿ, ಪ್ರಕಾಶ್ ಬಾರಿಮರದ್, ಆದರ್ಶ್, ಚಂದ್ರಿಬಾಯಿ, ಪ್ರದೀಪ್, ಗೋಪಿ, ಚೇತನ್ ಮತ್ತು ಆನಂದ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ…
ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…