ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಸುಮಾರು 41,000 ಕೋಟಿ ರೂಪಾಯಿ ಮೌಲ್ಯದ 2,000 ಕ್ಕೂ ಹೆಚ್ಚು ರೈಲ್ವೆ ಮೂಲಸೌಕರ್ಯ ಯೋಜನೆಗಳಿಗೆ ಗ್ರೀನ್ ಸಿಗ್ನಲ್ ನೀಡಿದರು.
554 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ ಮತ್ತು 1500 ರಸ್ತೆ ಮೇಲ್ಸೇತುವೆಗಳು ಮತ್ತು ಅಂಡರ್ ಪಾಸ್ ಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದರು.
ಅದೇರೀತಿ ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದಲ್ಲೂ ಸಹ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಯಿತು.
ಬೆಂಗಳೂರು ವಿಭಾಗದ ವ್ಯಾಪ್ತಿಯಲ್ಲಿ 15 ನೈಋತ್ಯ ರೈಲ್ವೆ (SWR) ಅಮೃತ್ ಭಾರತ್ ನಿಲ್ದಾಣದ ಪುನರಾಭಿವೃದ್ಧಿ ಆಗಲಿದೆ.
ಬಂಗಾರಪೇಟೆ, ಚನ್ನಪಟ್ಟಣ, ಧರ್ಮಪುರಿ, ದೊಡ್ಡಬಳ್ಳಾಪುರ, ಹಿಂದೂಪುರ, ಹೊಸೂರು, ಕೆಂಗೇರಿ, ಕೆ.ಆರ್.ಪುರಂ ರೈಲ್ವೆ ನಿಲ್ದಾಣ, ಮಲ್ಲೇಶ್ವರಂ, ಮಾಲೂರು, ಮಂಡ್ಯ, ತುಮಕೂರು, ರಾಮನಗರ ಮತ್ತು ವೈಟ್‌ಫೀಲ್ಡ್, ಕುಪ್ಪಂ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುವುದು.