ಹೊಟ್ಟೆ ನೋವು ಎಂದು 45 ವರ್ಷದ ಮಹಿಳೆ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದು, ಸೂಕ್ತ ರೀತಿಯಲ್ಲಿ ತಪಾಸಣೆ ನಡೆಸಿದ ವೈದ್ಯರು, ಆಕೆಯ ಹೊಟ್ಟೆಯಲ್ಲಿದ್ದ 5 ಕೆ.ಜಿ ಗಡ್ಡೆಯನ್ನ ಹೊರಗೆ ತೆಗೆದಿದ್ದಾರೆ.
ದೊಡ್ಡಬಳ್ಳಾಪುರ ನಗರದ 45 ವರ್ಷದ ಮಹಿಳೆ ಕಳೆದ ಮೂರು ತಿಂಗಳಿಂದ ಹೊಟ್ಟೆ ನೋವಿನಿಂದ ನರಳುತ್ತಿದ್ದರು, ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದ ಮಹಿಳೆ ವೈದ್ಯರನ್ನು ಭೇಟಿ ಮಾಡಿದ್ದಾರೆ, ಮಹಿಳೆಯನ್ನು ಡಾ. ಅರ್ಚನಾ ಪರೀಕ್ಷೆ ನಡೆಸಿದ್ದಾರೆ, ಸ್ಕ್ಯಾನಿಂಗ್ ನಲ್ಲಿ ಆಕೆಯ ಹೊಟ್ಟೆಯಲ್ಲಿ 5 ಕೆ.ಜಿ ಗಡ್ಡೆ ಇರುವುದು ಪತ್ತೆಯಾಗಿದೆ.
ಡಾ.ಅರ್ಜನಾ ನೇತೃತ್ವದ ತಂಡ ಸತತ ಎರಡು ಗಂಟೆ ಶಸ್ತ್ರಚಿಕಿತ್ಸೆಯನ್ನ ನಡೆಸಿ ಆಕೆಯ ಹೊಟ್ಟೆಯಲ್ಲಿದ್ದ ಗಡ್ಡೆಯನ್ನ ಹೊರಗೆ ತೆಗೆದಿದ್ದಾರೆ, ಮಹಿಳೆ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯ ನಿಗಾ ಘಟಕದಲ್ಲಿ ದಾಖಲು ಮಾಡಲಾಗಿದೆ. ಹೆಚ್ಚಿನ ಪರೀಕ್ಷೆಗಾಗಿ ಗಡ್ಡೆಯನ್ನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ.
ಶಸ್ತ್ರಚಿಕಿತ್ಸೆ ನಡೆಸಿದ ಡಾ.ಅರ್ಚನಾ ನೇತೃತ್ವದ ವೈದ್ಯರ ತಂಡವನ್ನ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಟಿಎಚ್ಓ ಡಾ.ಶಾರದಾ ನಾಗನಾಥ್, ಡಾ.ಮಂಜುನಾಥ್ ಸೇರಿದಂತೆ ಇತರರು ಅಭಿನಂಧಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಅಜಾಕ್ಸ್ ಶಾಲೆ ಹಿಂಭಾಗ ಶವ ಪತ್ತೆಯಾಗಿದೆ... ಮೃತ ದುರ್ದೈವಿಯನ್ನು ಒರಿಸ್ಸಾ ಮೂಲದ ಸುಮಂತ್(24) ಎಂದು ಗುರುತಿಸಲಾಗಿದೆ....…
ಏನೇನು ಅವತಾರಗಳೋ, ಅಬ್ಬಬ್ಬಾ......... ಹೊಸ ವರ್ಷವೆಂಬ ಸಂಭ್ರಮ ಮತ್ತು ಉನ್ಮಾದ........... ಸಾವಿರಾರು ಪೋಲೀಸರ ಬಿಗಿ ಬಂದೋ ಬಸ್ತ್, ದ್ರೋಣ್ ಕ್ಯಾಮರಾದ…
ಬೆಂಗಳೂರು ಗ್ರಾಮಾಂತರ ಪೊಲೀಸ್ ಎಸ್ಪಿ ಆಗಿದ್ದ ಸಿ.ಕೆ ಬಾಬಾ ಅವರಿಗೆ ಬಡ್ತಿ ನೀಡಿ ಕರ್ನಾಟಕ ರಾಜ್ಯ ಮೀಸಲು ಪಡೆಯ ಡಿಐಜಿ…
ಹೊಸ ವರ್ಷದ ಸಂಭ್ರಮದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಯಾಗಿದೆ. ರಾಜ್ಯದಾದ್ಯಂತ 48 ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ…
ದೊಡ್ಡಬಳ್ಳಾಪುರದ ಪಾಲನಜೋಗಿಹಳ್ಳಿ, ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯು 2025ರ ಮೇ.11ರಂದು ಪ್ರಾರಂಭವಾಗಿ ಆಧುನಿಕ ತಂತ್ರಜ್ಞಾನ,…
ಪ್ರತಿ ವರ್ಷ ಚಳಿಗಾಲದಲ್ಲಿ ಬರುವ ಹಬ್ಬದಲ್ಲಿ, ಬೆಂಗಳೂರು ಮೆಡಿಕವರ್ ಆಸ್ಪತ್ರೆಗಳಲ್ಲಿ ಹೊಟ್ಟೆ ಸಂಬಂಧಿತ (ಗ್ಯಾಸ್ಟ್ರೋ) ಹೊರರೋಗಿ ವಿಭಾಗ (OPD) ಮತ್ತು…