
ಕೇಂದ್ರ ಪುರಸ್ಕೃತ ಅಮೃತ್ 2.0 ಯೋಜನೆಯಡಿ ದೊಡ್ಡಬಳ್ಳಾಪುರ ನಗರದಲ್ಲಿ ಬಿಟ್ಟು ಹೋಗಿರುವ ಪ್ರದೇಶಗಳಲ್ಲಿ ವಿತರಣಾ ಕೊಳವೆ ಮತ್ತು ಗೃಹ ಸಂಪರ್ಕ ಕಲ್ಪಿಸುವ ಕಾಮಗಾರಿಗಳಿಗೆ ದೊಡ್ಡಬಳ್ಳಾಪುರದ ಭುವನೇಶ್ವರಿ ನಗರದಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ಭೂಮಿ ಪೂಜೆ ನೆರವೇರಿಸದರು.

ಅದೇರೀತಿ ಭುವನೇಶ್ವರಿ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 5 ಲಕ್ಷ ಲೀಟರ್ ಸಾಮರ್ಥ್ಯವುಳ್ಳ ಓವರ್ ಹೆಡ್ ಟ್ಯಾಂಕ್ ನ್ನು ಸಹ ವಾರ್ಡ್ ನ ಸದಸ್ಯ ಬಂತಿ ವೆಂಕಟೇಶ್ ಅವರ ಉಪಸ್ಥಿತಿಯಲ್ಲಿ ಶಾಸಕ ಧೀರಜ್ ಮುನಿರಾಜ್ ಅವರು ಉದ್ಘಾಟನೆ ಮಾಡಿದರು.

ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆನಂದ್, ಉಪಾಧ್ಯಕ್ಷ ಮಲ್ಲೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ವಡ್ಡರಹಳ್ಳಿ ರವಿ, ನಗರಸಭಾ ಸದಸ್ಯರಾದ ತ.ನ ಪ್ರಭುದೇವ್, ಬಂತಿ ವೆಂಕಟೇಶ್, ಪದ್ಮನಾಭ, ಲಕ್ಷ್ಮಿಪತಿ, ಶಿವು, ಸೇರಿದಂತೆ ಎಲ್ಲಾ ನಗರಸಭಾ ಸದಸ್ಯರು, ನಗರಸಭೆ ಪೌರಾಯುಕ್ತ ಕಾರ್ತೀಕೇಶ್ವರ್ ಸೇರಿದಂತೆ ಪ್ರಮುಖರು ಹಾಗೂ ಸಾರ್ವಜನಿಕರು, ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.