ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ ಕೇಳಿಬಂದಿದೆ. ಬಾಗಲಕೋಟೆ ಮೂಲದ ಡೆವಲಪರ್ ಮಂಜುನಾಥ್ ಎಂಬುವರಿಂದ ಒಂದು ಎಕರೆ ಜಮೀನಿನ ಅಭಿವೃದ್ಧಿಗೆ ಸಂಬಂಧಿಸಿದಂತೆ 1 ಕೋಟಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮುಂಗಡವಾಗಿ 50 ಲಕ್ಷ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಧಾರವಾಡ ತಾಲೂಕಿನ ಯರಿಕೊಪ್ಪ ಬಳಿ ಡೆವಲಪರ್ ಜಮೀನು ಖರೀದಿಸಿದ್ದು, ಅದರಲ್ಲಿನ ‘ಅ-ಖರಾಬ್’ ತೆರವುಗೊಳಿಸಿ ಅಭಿವೃದ್ಧಿಪಡಿಸಲು ಮುಂದಾಗಿದ್ದರು ಎನ್ನಲಾಗಿದೆ. ಈ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 50 ಲಕ್ಷ ಪಡೆಯುತ್ತಿದ್ದ ವೇಳೆ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…
ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ
ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…
ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…
ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…