Categories: ರಾಜ್ಯ

545 ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ: ರಾಜ್ಯ ಸರ್ಕಾರದಿಂದ ನ್ಯಾಯಾಂಗ ತನಿಖೆಗೆ ಆದೇಶ

ಪೊಲೀಸ್ ಸಬ್‌ ಇನ್ಸ್ ಪೆಕ್ಟರ್ (ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು 2021ರ ಅಕ್ಟೋಬರ್ 3ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ಒಳಪಡಿಸಲಾಗಿದೆ.

ಈ ಹಿನ್ನೆಲೆ 545 ಪಿ.ಎಸ್.ಐ ನೇಮಕಾತಿ ಲಿಖಿತ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ನಡೆಸಲು ಅನುವಾಗುವಂತೆ Commissions of Inquiry Act 1952 (Central Act LX of 1952) ರ ನಿಯಮ 3ರ ಉಪ ನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಬಿ. ವೀರಪ್ಪ ರವರ ನೇತೃತ್ವದಲ್ಲಿ ಏಕ ಸದಸ್ಯ ತನಿಖಾ ಆಯೋಗವನ್ನು ನೇಮಿಸಿದೆ.

ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ. ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಹೆಚ್ಚುವರಿ ತನಿಖೆಯನ್ನು ಮುಂದುವರೆಸಲಾಗಿರುತ್ತದೆ.

ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆಯನ್ನು ಬರೆದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ 1977ರ ಕರ್ನಾಟಕ ನಾಗರೀಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳಲ್ಲಿ ನಿಯಮ 20ರಲ್ಲಿ ನಮೂದಿಸಿರುವ ದುರ್ನಡತೆಯನ್ನು ಎಸಗಿರುವ ಕಾರಣ ಡಿಜಿಪಿ ನೇಮಕಾತಿ ಇವರ ಆದೇಶ ಸಂಖ್ಯೆ: 98/ನೇಮಕಾತಿ- 2/2020-21, ದಿನಾಂಕ: 20.06.2023ರಲ್ಲಿ ಸದರಿಯವರುಗಳನ್ನು ಪೊಲೀಸ್‌ ಇಲಾಖೆ ನಡೆಸುವ ಎಲ್ಲಾ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿದೆ (Permanently Debarred).

545 ಪೊಲೀಸ್ ಸಬ್-ಇನ್ಸ್‌ಪೆಕ್ಟ‌ರ್ ನೇರ ನೇಮಕಾತಿ ಪ್ರಕಿಯೆಯಲ್ಲಿ ಬಹು ಆಯಾಮದ ಅಕ್ರಮಗಳು ನಡೆದಿರುವುದು ಕಂಡುಬಂದಿರುವುದರಿಂದ ಹಾಗೂ ಈ ಅಕ್ರಮ ಪಕ್ರರಣವು ಗಂಭೀರ ಸ್ವರೂಪದಾಗಿದ್ದು, ಸಾರ್ವಜನಿಕ ಮಹತ್ವವುಳ್ಳ ವಿಷಯವಾಗಿರುವುದರಿಂದ, ಇನ್ನುಮುಂದೆ ನಡೆಯುವ ಪೊಲೀಸ್ ನೇಮಕಾತಿಗಳು ಅತ್ಯಂತ ಪಾರದರ್ಶಕವಾಗಿ ನಡೆಸುವ ಅಗತ್ಯವಿರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯ ಅಗತ್ಯವಿರುವುದನ್ನು ಮನಗಂಡು, Commissions of Inquiry Act 1952ರ ನಿಯಮ 3ರ ಉಪ ನಿಯಮ 1 ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ನಿರ್ಧರಿಸಿದೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

7 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

11 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

12 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

13 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

15 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

18 hours ago