ಪೇಸ್ಟ್ ರೂಪದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಏರ್ ಪ್ರಯಾಣಿಕನನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರು ಏರ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತನು 55 ಲಕ್ಷ ರೂಪಾಯಿ ಮೌಲ್ಯದ ಸುಮಾರು 799 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಒಳ ಉಡುಪುಗಳಲ್ಲಿ ಇಟ್ಟು ಮರೆಮಾಚಿ ಸಾಗಾಟ ಮಾಡಲು ಯತ್ನಿಸಿದಾಗ ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ.
ಸಿಂಗಾಪುರದಿಂದ ಬಂದ ಇಂಡಿಗೋ 6E1006 ವಿಮಾನದಲ್ಲಿ ಆಗಮಿಸಿದ್ದ ಪ್ರಯಾಣಿಕನನ್ನು ತಡೆದು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ವಿಚಾರಣೆ ಮುಂದುವರಿದಿದೆ.