ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು ಅವರು, 56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ. ಎದೆ ಎಷ್ಟು ಇಂಚಿದೆ ಎನ್ನುವುದು ಮುಖ್ಯವಲ್ಲ, ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇರುವುದು ಮುಖ್ಯ. ಈ ಪ್ರೀತಿ ಮೋದಿಯವರಲ್ಲಿ ಇಲ್ಲ ಎಂದು ತಿಳಿಸಿದರು.
ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ ₹1,350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ? ಎಂದು ಪ್ರಶ್ನೆ ಮಾಡಿದರು.
ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.
ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1,892 ಮನೆಗಳನ್ನು ವಿತರಿಸಿದ್ದೇವೆ ಎಂದು ಹೇಳಿದರು.
ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ನಮಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು.
ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದರು.
ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಹೇಳಿದರು.
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…
ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…
ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…