56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ- ಸಿಎಂ ಸಿದ್ದರಾಮಯ್ಯ

ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದರು.

ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು ಅವರು, 56 ಇಂಚಿನ ಎದೆಯ ಪ್ರಧಾನಿ ನರೇಂದ್ರ ಮೋದಿ ಅವರು ನಿಷ್ಕ್ರಿಯ ಆಗಿದ್ದಾರೆ.‌ ಎದೆ ಎಷ್ಟು ಇಂಚಿದೆ ಎನ್ನುವುದು ಮುಖ್ಯವಲ್ಲ, ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇರುವುದು ಮುಖ್ಯ. ಈ ಪ್ರೀತಿ ಮೋದಿಯವರಲ್ಲಿ‌ ಇಲ್ಲ ಎಂದು ತಿಳಿಸಿದರು.

ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ ₹1,350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ? ಎಂದು ಪ್ರಶ್ನೆ ಮಾಡಿದರು.

ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ ಎಂದರು.

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1,892 ಮನೆಗಳನ್ನು ವಿತರಿಸಿದ್ದೇವೆ ಎಂದು ಹೇಳಿದರು.

ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ನಮಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎನ್ನುವ ಭರವಸೆ ನನಗಿದೆ ಎಂದು ತಿಳಿಸಿದರು.

ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದರು.

ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ಹೇಳಿದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

6 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

8 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

10 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

10 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

12 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

17 hours ago