562 ಮಂದಿ ಮನೆಯಿಂದಲೇ ಮತದಾನ: ಜಿಲ್ಲಾಧಿಕಾರಿ ಆರ್.ಲತಾ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಇಂದು ನಡೆದ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 562 ಮಂದಿ ಉಪಯೋಗಿಸಿಕೊಂಡು ಮನೆಯಿಂದಲೇ ಮತದಾನ ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 133 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನ ಮತದಾರರಲ್ಲಿ 129 ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಿದ್ದಾರೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 100 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನ ಮತದಾರರಲ್ಲಿ 94 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 220 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ಮತದಾರರಲ್ಲಿ 215 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 130 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನ ಮತದಾರರಲ್ಲಿ 124 ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 562 ಮಂದಿ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ಮತದಾರರು ಮನೆಯಿಂದಲೇ ಮತದಾನ ಸೌಲಭ್ಯವನ್ನು ಉಪಯೋಗಿಸಿಕೊಂಡು ಮತದಾನ ಮಾಡಿದ್ದಾರೆ.

ಈ ಸೌಲಭ್ಯವನ್ನು ಬಳಸಿಕೊಳ್ಳಲು ಜಿಲ್ಲೆಯಾದ್ಯಂತ 583 ಕೋರಿಕೆ ಸಲ್ಲಿಸಿದ್ದು, 562 ಮಂದಿ ಈ ಸೌಲಭ್ಯದ ಸದುಪಯೋಗ ಪಡೆದಿದ್ದಾರೆ. 583ರಲ್ಲಿ 10 ಮಂದಿ ಮೃತಪಟ್ಟಿದ್ದು, 11 ಜನ ಮತದಾರರು ಅಲಭ್ಯವಿದ್ದ ಕಾರಣ ನಾಳೆ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಪುನಃ ಅವರ ಮನೆಗಳಿಗೆ ಎರಡನೆಯ ಹಾಗೂ ಕಡೆಯ ಬಾರಿಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

1 hour ago

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧ ಆಯ್ಕೆ

ಛಲವಾದಿ‌‌ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…

3 hours ago

ಖತರ್ನಾಕ್ ಬೈಕ್ ಕಳ್ಳರ ಬಂಧನ: ಬಂಧಿತರಿಂದ 18.30 ಲಕ್ಷ ಮೌಲ್ಯದ 27 ಬೈಕ್ ಗಳು ವಶ

ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…

3 hours ago

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

8 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

10 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

23 hours ago