2023ನೇ ಸಾಲಿನಲ್ಲಿ ಪದ್ಮ ಪ್ರಶಸ್ತಿಗೆ ಭಾಜನರಾದ 106 ಮಂದಿಗೆ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿ ಪ್ರದಾನ ಮಾಡಿದರು. ಈ ಬಾರಿ ಕರ್ನಾಟಕದ 8 ಮಂದಿ ಸಾಧಕರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪದ್ಮವಿಭೂಷಣ, ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರ ದಿಂದ ಡಾ. ಖಾದರ್ ವಲ್ಲಿ ದುಡೆ ಕುಲ್ಲಾ, ನೃತ್ಯದ ಮೂಲಕ ಕೊಡವ ಸಂಸ್ಕೃತಿಯನ್ನು ಪಸರಿಸಲು ಶ್ರಮಿಸಿದ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ರಾಣಿ ಮಾಚಯ್ಯ, ತಮಟೆಯ ತಂದೆಯೆಂದು ಪ್ರಖ್ಯಾತರಾದ ಚಿಕ್ಕಬಳ್ಳಾಪುರದ ಪಿಂಡಿ ಪಾಪನಹಳ್ಳಿ ಮುನಿವೆಂಕಟಪ್ಪ, ಬೀದರ್‌ನ ಕಲಾವಿದ ಷಾ ರಶೀದ್ ಅಹ್ಮದ್ ಖಾದ್ರಿ, ಪುರಾತತ್ವ ಶಾಸ್ತ್ರಜ್ಞ ಎಸ್.ಸುಬ್ಬರಾಮನ್ ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾದ ಕರ್ನಾಟಕದ ಸಾಧಕರು.