ಕೆ.ಎಸ್ ಈಶ್ವರಪ್ಪ ನವರನ್ನು ತಕ್ಷಣವೇ ಜಾರಿಗೆ ಬರುವಂತೆ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಮತ್ತು 6 ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟನೆಗೊಳಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ.
ಪಕ್ಷದ ಸೂಚನೆಯನ್ನು ಕಡೆಗಣಿಸಿ ಹಾಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದೀರಿ. ಇದು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಆದ್ದರಿಂದ ಅವರನ್ನು ತಕ್ಷಣವೇ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗುತ್ತದೆ ಮತ್ತು ಆರು (6) ವರ್ಷಗಳ ಅವಧಿಗೆ ಪಕ್ಷದಿಂದ ಹೊರಹಾಕಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸೆಡ್ಡು ಹೊಡೆದು, ಅವರ ಪುತ್ರ ಬಿ.ವೈ.ರಾಘವೇಂದ್ರ ವಿರುದ್ಧ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು.
ತಮ್ಮ ಪುತ್ರನಿಗೆ ಹಾವೇರಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಿಲ್ಲ ಎಂಬ ಕಾರಣಕ್ಕೆ ಆಕ್ರೋಶಗೊಂಡಿದ್ದ ಈಶ್ವರಪ್ಪ, ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ಸಮರ ಸಾರಿದ್ದರು.
ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…