60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ. ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.
ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದರು.
ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…