60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಹೆಚ್ಡಿಕೆ ಆರೋಪ‌: ಇದು ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ- ಸಿಎಂ ಸಿದ್ದರಾಮಯ್ಯ

60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ‌ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ. ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಕೊಳ್ಳುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಎಂದು ಪ್ರಶ್ನಿಸಿದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದರು.

ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ತಿಳಿಸಿದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

2 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

12 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago