ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ಮೆಳೇಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿನಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ರಂಜಿತಾ ಎ.ಸಿ ಮನೆಯಲ್ಲೇ ಸಂಭ್ರಮ ಮನೆಮಾಡಿತ್ತು. ಶಿಕ್ಷಕರು, ಪೋಷಕರು, ಸ್ನೇಹಿತರು, ಸಂಬಂಧಿಕರು ಸೇರಿದಂತೆ ಇತರರು ಸಿಹಿ ಸವಿದು ಸಂಭ್ರಮಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿ, ಕೊಯಿರ ಗ್ರಾಮ ಪಂಚಾಯಿತಿಯ ಅರುವನಹಳ್ಳಿ ಗ್ರಾಮದ ನಿವಾಸಿ ರಂಜಿತಾ ಎ.ಸಿ ಅವರ ತಂದೆ ಚಂದ್ರಶೇಖರ್ ರೈತರಾಗಿದ್ದು, ತಾಯಿ ಅನಿತಾ ಗೃಹಿಣಿಯಾಗಿದ್ದಾರೆ.
“ಪಬ್ಲಿಕ್ ಮಿರ್ಚಿ” ಜೊತೆ ಮಾತನಾಡಿದ ರಂಜಿತಾ ಎ.ಸಿ, “ಶಾಲೆಯ ಅವಧಿ ಬಿಟ್ಟು ಪ್ರತಿನಿತ್ಯ 8 ಗಂಟೆ ಅಭ್ಯಾಸ ಮಾಡುತ್ತಿದ್ದೆ. ದಿನಕ್ಕೆ 5-6 ತಾಸು ಓದುತ್ತಿದ್ದೆ. ಶಿಕ್ಷಕರ ಪ್ರೋತ್ಸಾಹ ಸಾಕಷ್ಟಿತ್ತು. ಅಪ್ಪ-ಅಮ್ಮ ನನಗೆ ಓದಲು ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದ್ದರು. ಕಂಠಪಾಠಕ್ಕಿಂತ ಅರ್ಥ ಮಾಡಿಕೊಂಡು ಓದಿದರೆ ನೆನಪಿನಲ್ಲಿ ಇಟ್ಟುಕೊಳ್ಳುವುದು ಸುಲಭವಾಗುತ್ತದೆ. ಮುಂದೆ ಪಿಯುಸಿಯಲ್ಲಿ ವಿಜ್ಞಾನ ವಿಷಯ ತೆಗೆದುಕೊಳ್ಳುತ್ತೇನೆ. ಭವಿಷ್ಯದಲ್ಲಿ ಯುಪಿಎಸ್ ಸಿ ಪರೀಕ್ಷೆ ತೆಗೆದುಕೊಂಡು ಜಿಲ್ಲಾಧಿಕಾರಿ ಆಗುವ ಗುರಿ ಇಟ್ಟುಕೊಂಡಿದ್ದೇನೆ ಎಂದರು.
ರಂಜಿತಾ ಎ.ಸಿ ತಂದೆ ಚಂದ್ರಶೇಖರ್ ಮಾತನಾಡಿ, ನನ್ನ ಮಗಳ ಈ ಸಾಧನೆಯಿಂದ ನನಗೆ ಬಹಳ ಸಂತಸ ತಂದಿದೆ. ಮುಂದೆ ಉನ್ನತ ವ್ಯಾಸಂಗ ಮಾಡಿಸಿ ಜಿಲ್ಲಾಧಿಕಾರಿಯನ್ನಾಗಿ ಮಾಡುತ್ತೇನೆ. ನನ್ನ ಮಗಳ ಸಾಧನೆಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿದೆ ಎಂದರು.
ದೊಡ್ಡಬಳ್ಳಾಪುರ: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ದಂಪತಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ಜಪಾನಿನ ಐಚಿ - ನಾಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಮತ್ತು ಭಾರತದ ವಿವಿಧ ಭಾಷೆಯ ಟಿವಿ ಚಾನಲ್ ಗಳಲ್ಲಿ ಪ್ರಸಾರವಾಗುತ್ತಿರುವ…
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…