7 ವರ್ಷದ ಬಾಲಕನಿಗೆ ಹಾವು ಕಡಿತ ಪ್ರಕರಣ: ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆ: ಪ್ರಾಣಾಪಾಯದಿಂದ ಪಾರಾಗಿ ಬದುಕುಳಿದ ಬಾಲಕ: ವೈದ್ಯರಿಗೆ ಧನ್ಯವಾದ ಸಲ್ಲಿಕೆ

ದೊಡ್ಡಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕ, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಸಾವನ್ನೇ ಗೆದ್ದು ಬದುಕುಳಿದು ಬಂದಿದ್ದಾನೆ. ಅದಕ್ಕೆ ವೈದ್ಯೋ ನಾರಾಯಣ ಹರಿ ಎಂದು ಕರೆಯುವುದು…

ಈ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ ಬಾಲಕ ಇಂದು ಪೋಷಕರೊಂದಿಗೆ ನಗರದ ಸರ್ಕಾರಿ ಆಸ್ಪತ್ರೆಗೆ ಬಂದು ತ್ವರಿತವಾಗಿ ಚಿಕಿತ್ಸೆ ನೀಡಿ, ಜೀವ ಉಳಿಸಿದ ವೈದ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾನೆ.

ಬಾಲಕ ಹಾಗೂ ಪೋಷಕರ ಧನ್ಯವಾದಕದಕೆ ವೈದ್ಯಕೀಯ ಸಿಬ್ಬಂದಿಯ ಮೊಗದಲ್ಲಿ ಸಾರ್ಥಕತೆ ಕಂಡುಬಂತು.

ಇದೇ ಆ.23 ರಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಹಳ್ಳಿ ಬಳಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕ ಕುಟುಂಬದೊಂದಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಅಮೀದ್ ಕುಮಾರ್‌ಗೆ (7 ವರ್ಷ) ನಾಗರಹಾವು ಕಚ್ಚಿತ್ತು.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಕೂಡಲೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯ ವೈದ್ಯರಾದ ಡಾ.ರಾಜು, ಡಾ.ವಿಜಯ ಅವರು ತುರ್ತು ಚಿಕಿತ್ಸೆಯ ಸತತ ಪ್ರಯತ್ನದ ಫಲವಾಗಿ ಬಾಲಕ ಸ್ವಲ್ಪ ಮಟ್ಟಿಗೆ ಉಸಿರಾಟ ಪ್ರಾರಂಭಿಸಿದನು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಹಿತ್ತು.

ಈ ವೇಳೆ ಆಕಾಶ್‌ ಆಸ್ಪತ್ರೆ ವೈದ್ಯರಾದ ಡಾ.ಮನೋಜ್, ಡಾ.ನಿತೀಶ್ ಮಗುವಿಗೆ ಚಿಕಿತ್ಸೆ ನೀಡುತ್ತಾ ಆಂಬ್ಯುಲೆನ್ಸ್ ನಲ್ಲಿ ಬಾಲಕನ ಜೊತೆ ತೆರಳಿ, ವಿಕ್ಟೋರಿಯಾ ಆಸ್ಪತ್ರೆಯ ಮಕ್ಕಳ ತುರ್ತು ಘಟಕದಲ್ಲಿ ದಾಖಲಿಸಿದ್ದರು.

ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆಯಿಂದ ಅದೃಷ್ಟವಶಾತ್ ಬಾಲಕ ಅಮೀದ್ ಕುಮಾ‌ರ್ ಜೀವಾಪಾಯದಿಂದ ಪಾರಾಗಿದ್ದಾನೆ.

Ramesh Babu

Journalist

Share
Published by
Ramesh Babu

Recent Posts

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

5 minutes ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

13 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

14 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

17 hours ago