Oplus_0
ದೊಡ್ಡಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕ, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಸಾವನ್ನೇ ಗೆದ್ದು ಬದುಕುಳಿದು ಬಂದಿದ್ದಾನೆ. ಅದಕ್ಕೆ ವೈದ್ಯೋ ನಾರಾಯಣ ಹರಿ ಎಂದು ಕರೆಯುವುದು…
ಈ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ ಬಾಲಕ ಇಂದು ಪೋಷಕರೊಂದಿಗೆ ನಗರದ ಸರ್ಕಾರಿ ಆಸ್ಪತ್ರೆಗೆ ಬಂದು ತ್ವರಿತವಾಗಿ ಚಿಕಿತ್ಸೆ ನೀಡಿ, ಜೀವ ಉಳಿಸಿದ ವೈದ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾನೆ.
ಬಾಲಕ ಹಾಗೂ ಪೋಷಕರ ಧನ್ಯವಾದಕದಕೆ ವೈದ್ಯಕೀಯ ಸಿಬ್ಬಂದಿಯ ಮೊಗದಲ್ಲಿ ಸಾರ್ಥಕತೆ ಕಂಡುಬಂತು.
ಇದೇ ಆ.23 ರಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಹಳ್ಳಿ ಬಳಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕ ಕುಟುಂಬದೊಂದಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಅಮೀದ್ ಕುಮಾರ್‌ಗೆ (7 ವರ್ಷ) ನಾಗರಹಾವು ಕಚ್ಚಿತ್ತು.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಕೂಡಲೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯ ವೈದ್ಯರಾದ ಡಾ.ರಾಜು, ಡಾ.ವಿಜಯ ಅವರು ತುರ್ತು ಚಿಕಿತ್ಸೆಯ ಸತತ ಪ್ರಯತ್ನದ ಫಲವಾಗಿ ಬಾಲಕ ಸ್ವಲ್ಪ ಮಟ್ಟಿಗೆ ಉಸಿರಾಟ ಪ್ರಾರಂಭಿಸಿದನು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಹಿತ್ತು.
ಈ ವೇಳೆ ಆಕಾಶ್ ಆಸ್ಪತ್ರೆ ವೈದ್ಯರಾದ ಡಾ.ಮನೋಜ್, ಡಾ.ನಿತೀಶ್ ಮಗುವಿಗೆ ಚಿಕಿತ್ಸೆ ನೀಡುತ್ತಾ ಆಂಬ್ಯುಲೆನ್ಸ್ ನಲ್ಲಿ ಬಾಲಕನ ಜೊತೆ ತೆರಳಿ, ವಿಕ್ಟೋರಿಯಾ ಆಸ್ಪತ್ರೆಯ ಮಕ್ಕಳ ತುರ್ತು ಘಟಕದಲ್ಲಿ ದಾಖಲಿಸಿದ್ದರು.
ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆಯಿಂದ ಅದೃಷ್ಟವಶಾತ್ ಬಾಲಕ ಅಮೀದ್ ಕುಮಾರ್ ಜೀವಾಪಾಯದಿಂದ ಪಾರಾಗಿದ್ದಾನೆ.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…