706 ಮಂದಿ ಮನೆಯಿಂದಲೇ ಮತದಾನ-ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ

2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 85 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 737 ಮತದಾರರ ಪೈಕಿ 706 ಮಂದಿ ಇದರ ಅವಕಾಶ ಪಡೆದುಕೊಂಡು ಮನೆಯಿಂದಲೇ ಮತದಾನ ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 120 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 37 ವಿಕಲಚೇತನ ಮತದಾರರು ಸೇರಿ ಒಟ್ಟು 157 ಮತದಾರರ ಪೈಕಿ 147(ಶೇ.93.63%)ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 85 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 24 ವಿಕಲಚೇತನ ಮತದಾರರು ಸೇರಿ ಒಟ್ಟು 109 ಮತದಾರರ ಪೈಕಿ 104(ಶೇ.95.41%)ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿನ 159 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 107 ವಿಕಲಚೇತನನರು ಸೇರಿ ಒಟ್ಟು 266 ಮತದಾರರಲ್ಲಿ 257(96.62%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

181-ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿನ 148 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 57 ವಿಕಲಚೇತನ ಮತದಾರರು ಸೇರಿ ಒಟ್ಟು 205 ಮತದಾರರ ಪೈಕಿ 198(96.59%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 512 ಮಂದಿ 85 ವರ್ಷ ತುಂಬಿದ ಹಿರಿಯ ನಾಗರಿಕರು ಹಾಗೂ 225 ವಿಕಲಚೇತನರ ಮತದಾರರು ಸೇರಿ ಒಟ್ಟು 737 ಮಂದಿ ಮತದಾರರ ಪೈಕಿ 706(95.79%) ಮತದಾರರು ಮನೆಯಿಂದಲೇ ಮತದಾನ ಸೌಲಭ್ಯವನ್ನು ಪಡೆದುಕೊಂಡು ಮತದಾನ ಮಾಡಿದ್ದಾರೆ.

737 ಮತದಾರರ ಪೈಕಿ 12 ಮಂದಿ ಮೃತಪಟ್ಟಿದ್ದು,12 ಮಂದಿ ಆಸ್ಪತ್ರೆಯಲ್ಲಿದ್ದು, 11 ಮಂದಿ ಮತದಾರರು ಅಲಭ್ಯವಿದ್ದರು. ಅಲಭ್ಯವಿದ್ದ ಮತದಾರರಿಗೆ ಉಳಿದ ದಿನ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಪುನಃ ಅವರ ಮನೆಗಳಿಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

4 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

6 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

6 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

7 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

8 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

13 hours ago