74ನೇ ಗಣರಾಜ್ಯೋತ್ಸವ; ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಆರ್.ಲತಾ
“74ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾದ 74ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.