78ನೇ ಸ್ವಾತಂತ್ರ್ಯ ದಿನಾಚರಣೆ:- ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿದ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಗೋಪುರ

ನಾಳೆ(ಆ.15) ದೇಶಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆಗೆ ಸಕಲ ಸಿದ್ಧತೆ ನಡೆಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮವನ್ನು ವೈವಿದ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲು ತೀರ್ಮಾನಿಸಲಾಗಿದೆ.

ಈ ಸಂಭ್ರಮದ ಒಂದು ಭಾಗವಾಗಿ “ಹರ್ ಘರ್ ತಿರಂಗಾ” ಎಂಬ ಘೋಷವಾಕ್ಯದೊಂದಿಗೆ 2024 ರ ಆಗಸ್ಟ್ 13 ರಿಂದ 15 ರವರೆಗೆ ದೇಶದ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರಧ್ವಜವನ್ನು ಹಾರಿಸಿ, ದೇಶ ಭಕ್ತಿ, ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಿ ದಾಖಲಿಸುವಂತೆ ಕರೆ ನೀಡಲಾಗಿದೆ.

ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ರಾಜ ಗೋಪುರವು ತ್ರಿವರ್ಣ- ಕೇಸರಿ, ಬಿಳಿ, ಹಸಿರು ಬಣ್ಣಗಳನ್ನು ಒಳಗೊಂಡ ವಿದ್ಯುತ್ ದೀಪಾಲಂಕಾರದಿಂದ ಜಗಮಗಿಸಿತು.

ಈ ವರ್ಣರಂಜಿತ ದೃಶ್ಯವನ್ನು ದೇವಸ್ಥಾನಕ್ಕೆ ಬಂದ ಭಕ್ತಾಧಿಗಳು ಕಣ್ತುಂಬಿಕೊಂಡಿದಲ್ಲದೇ ತಮ್ಮ ತಮ್ಮ ಮೊಬೈಲ್ ಗಳಲ್ಲಿ ಸೆರೆಹಿಡಿದುಕೊಂಡು ಸಂಭ್ರಮಿಸಿದರು.

Leave a Reply

Your email address will not be published. Required fields are marked *

error: Content is protected !!