78 ನೇ ಸ್ವಾತಂತ್ರ್ಯ ದಿನಾಚರಣೆ: ಅ.2ಕ್ಕೆ ಜಿಲ್ಲಾ ಕ್ರೀಡಾಂಗಣ ಕಾಮಗಾರಿಗೆ ಭೂಮಿ ಪೂಜೆ-ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ “78ನೇ ಸ್ವಾತಂತ್ರ್ಯೋತ್ಸವ” ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರು ಹಾಗೂ ಗಣ್ಯರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಅ.2ಕ್ಕೆ ಜಿಲ್ಲಾ ಕ್ರೀಡಾಂಗಣ ಕಾಮಗಾರಿಗೆ ಭೂಮಿ ಪೂಜೆ

ಜಿಲ್ಲಾ ಕ್ರೀಡಾಂಗಣಕ್ಕಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಭಿವೃದ್ಧಿ ಮಂಡಳಿ ವತಿಯಿಂದ 20.24 ಎಕರೆ ಭೂಮಿಯನ್ನು ದೊಡ್ಡಬಳ್ಳಾಪುರ ತಾಲ್ಲೂಕು ಆದಿ ನಾರಾಯಣ ಹೊಸಹಳ್ಳಿ ಗ್ರಾಮದಲ್ಲಿ ಹಂಚಿಕೆ ಮಾಡಲಾಗಿದ್ದು, ಜಿಲ್ಲಾ ಕ್ರೀಡಾಂಗಣದ ಕಾಮಗಾರಿಯ ಪೂಜೆಯನ್ನು 2024 ಅಕ್ಟೋಬರ್ 02 ರ ಗಾಂಧಿ ಜಯಂತಿಯಂದು ನೆರವೇರಿಸಲಾಗುವುದು.
ದೇವನಹಳ್ಳಿ ಪಟ್ಟಣದ ಸೂಲಿಬೆಲೆ ಮುಖ್ಯ ರಸ್ತೆಯ ದೇವನಹಳ್ಳಿ ಟೌನ್ ಕ್ರೀಡಾಂಗಣಕ್ಕೆ ವಿಶೇಷ ಅನುದಾನದಡಿಯಲ್ಲಿ ಕ್ರೀಡಾಂಗಣ ಅಭಿವೃದ್ಧಿಗಾಗಿ 50 ಲಕ್ಷ ರೂ. ಮತ್ತು ದೇವನಹಳ್ಳಿ ಸರ್ಕಾರ ಆಸ್ಪತ್ರೆ ಹಿಂಭಾಗದ ದೇವನಹಳ್ಳಿ ತಾಲ್ಲೂಕು ಕ್ರೀಡಾಂಗಣಕ್ಕೆ ಸ್ಥಳೀಯ ಪ್ರದೇಶಭಿವೃದ್ಧಿ ಯೋಜನೆಯಡಿಯಲ್ಲಿ 01 ಕೋಟಿ ರೂ. ಅನುದಾನವನ್ನು ಅಭಿವೃದ್ಧಿಗೆ ನೀಡಲಾಗುವುದು.

*ಅಂಗಾಂಗ ದಾನ ಮಾಡಿದ ಕುಟುಂಬಗಳಿಗೆ ಸನ್ಮಾನ*

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅಂಗಾಂಗ ದಾನ ಮಾಡಿದ ಜಿಲ್ಲೆಯ 15 ಜನರ ಕುಟುಂಬಗಳಿಗೆ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರ ಸಹಿಯುಳ್ಳ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

*ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ*

2024 ರ ಸೆಪ್ಟೆಂಬರ್ 13 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವು ದೇವನಹಳ್ಳಿ ಟೌನ್ ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಇದರ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹಾಗೂ ಗಣ್ಯರು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ’ದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದರು.

*ನರೇಗಾ ಕೈಪಿಡಿ ಬಿಡುಗಡೆ*
ಮಹಾತ್ಮಗಾಂಧಿ ನರೇಗಾ ಯೋಜನೆಯ ಸಂಪೂರ್ಣ ಮಾಹಿತಿಯುಳ್ಳ ಕೈಪಿಡಿ ಹಾಗೂ ಭಿತ್ತಿ ಪತ್ರ ಅನಾವರಣ ಮಾಡಲಾಯಿತು.

*ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ*

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳಿಸಿದ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ ಸುಧಾಕರ್, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ(ಬಯಪ)ಅಧ್ಯಕ್ಷರಾದ ಶಾಂತಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಕೆ ಬಾಬಾ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

2 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

5 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

17 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

20 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

23 hours ago

ಮ್ಯಾನ್‌ಹೋಲ್ ತುಂಬಿ ಹೆದ್ದಾರಿಗೆ ಹರಿದ ಕೊಳಚೆ ನೀರು

ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…

1 day ago