ಇಂದು ಭಾರತವು ತನ್ನ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನಗಳ ಫಲವಾಗಿ ಇಂದು ನಾವು ಆಚರಿಸುತ್ತಿರುವ ಸ್ವಾತಂತ್ರ್ಯೋತ್ಸವ ಆ ಮಹಾನ್ ಹೋರಾಟಗಾರರಿಗೆ ನೀಡುವ ಬಹುದೊಡ್ಡ ಗೌರವವಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಕೋರ್ಟ್ ಆವರಣದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ವಕೀಲರ ಸಂಘದ ವತಿಯಿಂದ 79ನೇ ಸಾತಂತ್ರ್ಯ ದಿನಾಚರಣೆಯನ್ನು ತ್ರಿವರ್ಣ ಧ್ವಜಕ್ಕೆ ಗೌರವ ಸೂಚಿಸುವ ಮೂಲಕ ಆಚರಿಸಲಾಯಿತು.
ಈ ವೇಳೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ನಿರ್ಮಲಾ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶಿಲ್ಪಾ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರವೀಣ್, ಸಿವಿಲ್ ನ್ಯಾಯಾಧೀಶರಾದ ದಾಸರಿ ಕ್ರಾಂತಿ ಕಿರಣ್ ಹಾಗೂ ಪ್ರೀತಿ, ತಾಲೂಕು ವಕೀಲರ ಸಂಘದ ಅಧ್ಯಕ್ಷ ರವಿ ಮಾವಿನಕುಂಟೆ, ಕಾರ್ಯದಶಿಗಳಾದ ಕೃಷ್ಣಮೂರ್ತಿ, ವಿಜಯ್ ಕುಮಾರ್, ಪದಾಧಿಕಾರಿಗಳು, ಸದ್ಯಸರು, ವಕೀಲೆ ಹಾಗೂ ವರದಿಗಾರರಾದ ಅನುಪಮ ಸೇರಿದಂತೆ ಇತರರು ಉಪಸ್ಥಿತರಿದ್ದರು…