
ಇಂದು ಭಾರತವು ತನ್ನ 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಅಸಂಖ್ಯಾತ ಹೋರಾಟಗಾರರ ತ್ಯಾಗ ಬಲಿದಾನಗಳ ಫಲವಾಗಿ ಇಂದು ನಾವು ಆಚರಿಸುತ್ತಿರುವ ಸ್ವಾತಂತ್ರ್ಯೋತ್ಸವ ಆ ಮಹಾನ್ ಹೋರಾಟಗಾರರಿಗೆ ನೀಡುವ ಬಹುದೊಡ್ಡ ಗೌರವ.
ಈ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ರಾಜಗೋಪುರವು ತ್ರಿವರ್ಣ ರಂಗಿನ ಬೆಳಕಿನಲ್ಲಿ ಕಂಗೊಳಿಸಿತು.

ನಿನ್ನೆ (ಆ.14) ರಾತ್ರಿಯಿಂದಲೇ ಗೋಪುರಕ್ಕೆ ಕೇಸರಿ, ಬಿಳಿ, ಹಸಿರು ಬಣ್ಣಗಳ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿತ್ತು. ಈ ತ್ರಿವರ್ಣ ದೀಪಾಲಂಕಾರವು ಭಕ್ತಾಧಿಗಳ ಕಣ್ಮನ ಸೆಳೆಯಿತು. ಸಾರ್ವಜನಿಕರು ತಮ್ಮ ಮೊಬೈಲ್ ಗಳಲ್ಲಿ ತ್ರಿವರ್ಣ ರಂಗಿನ ದೀಪಾಲಂಕಾರವನ್ನು ಸೆರೆ ಹಿಡಿದುಕೊಂಡು ಸಂಭ್ರಮಿಸಿದರು.