ಸರ್ಕಾರಿ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗ ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.
ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್(ಎಇ) ಕೆ.ಜಗಜ್ಯೋತಿ ಅವರು 84 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಬಲೆ ಬೀಸಿದ್ದಾರೆ.
ಎಸಿಬಿ ಅಧಿಕಾರಿಗಳನ್ನ ನೋಡಿ ಕಕ್ಕಾಬಿಕ್ಕಾಯಾದ ಮಹಿಳಾ ಅಧಿಕಾರಿ ಕಣ್ಣೀರಿಟ್ಟ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆರೋಪಿ ಮಹಿಳಾ ಅಧಿಕಾರಿಯಿಂದ ನಗದು ಜಪ್ತಿ ಮಾಡಿ, ಆಕೆಯನ್ನು ಬಂಧಿಸಿ ಹೈದರಾಬಾದ್ ನ ಎಸಿಬಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನಂತರ ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು ಅಧಿಕಾರಿಯ ನಿವಾಸದ ಮೇಲೆ ದಾಳಿ ನಡೆಸಿದಾಗ 65ಲಕ್ಷ ನಗದು, 4 ಕೆಜಿ ಬಂಗಾರ ದೊರೆತಿದೆ. ಇನ್ನಷ್ಟು ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…