87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಬೆಂಗಳೂರು ಗ್ರಾಮಾಂತರ, ಮಂಡ್ಯ, ಬಳ್ಳಾರಿ ಈ ಮೂರು ಜಿಲ್ಲೆಗಳಿಂದ ಭಾರೀ ಬೇಡಿಕೆ ಬಂದ ಹಿನ್ನೆಲೆಯಲ್ಲಿ ನಾಳೆ ಜಿಲ್ಲೆಯ ಹೆಸರು ಅಂತಿಮಗೊಳಿಸಿ, ಘೋಷಿಸುವ ಸಾಧ್ಯತೆ ಇದೆ.
ಶನಿವಾರ ನಡೆದ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮೂರೂ ಜಿಲ್ಲೆಗಳ ಕಸಾಪ ಜಿಲ್ಲಾ ಅಧ್ಯಕ್ಷರು ತಮ್ಮ ಜಿಲ್ಲೆಯಲ್ಲೇ ಸಮ್ಮೇಳನ ನಡೆಸುವಂತೆ ಹಕ್ಕೊತ್ತಾಯ ಮಂಡಿಸಿದರು.
87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಹಳೆ ಮೈಸೂರು ಭಾಗದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ಸಮ್ಮೇಳನ ನಡೆಸುವ ಜಿಲ್ಲೆಯ ಕುರಿತು ಚರ್ಚಿಸಲು ಶನಿವಾರ ಸಂಜೆ 7ಕ್ಕೆ ಗೌಪ್ಯ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಸಭೆಯಲ್ಲಿ ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಸೇರಿ ಮೂವತ್ತೂ ಜಿಲ್ಲೆಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.
ಎಲ್ಲಾ ಜಿಲ್ಲಾಧ್ಯಕ್ಷರ ಒಪ್ಪಿಗೆ ಮೇರೆಗೆ ಯಾವ ಜಿಲ್ಲೆಗೆ 87ನೇ ಸಾಹಿತ್ಯ ಸಮ್ಮೇಳನ ಎನ್ನುವುದು ಅಂತಿಮವಾಗಲಿದೆ.
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…