ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ದೂರುಗಳಲ್ಲಿ 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು ಎಂದು ಉಪ ಲೋಕಾಯುಕ್ತರಾದ ನ್ಯಾ. ಕೆ.ಎನ್ ಫಣೀಂದ್ರ ಅವರು ಹೇಳಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ನಾಲ್ಕುದಿನದ ಪ್ರವಾಸದ ಮೊದಲ ದಿನದ ಶನಿವಾರದಂದು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 81 ದೂರುಗಳು ಸಲ್ಲಿಕೆಯಾಗಿವೆ. ಅದರಲ್ಲಿ 03 ವಿವಿಧ ಪ್ರಕರಣಗಳು ಎಂದು ಗುರ್ತಿಸಲಾಗಿದೆ. 23 ಪ್ರಕರಣಗಳು ಕಾನೂನು ಸಲಹೆ, ಮೇಲ್ಮನವಿ, ಪೊಲೀಸ್ ತನಿಖೆ ಎಂದು ವಿಭಜಿಸಲಾಗಿ ಆಯಾ ವ್ಯಾಪ್ತಿಗೆ ಪ್ರಕರಣ ಹಸ್ತಾಂತರಿಸಲಾಗುವುದು ಎಂದರು.
ಸೋಮವಾರದಂದು ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಪೈಕಿ 74 ಪ್ರಕರಣ ವಿಚಾರಣೆ ನಡೆಸಿ 55 ಪ್ರಕರಣ ಇತ್ಯರ್ಥ ಪಡಿಸಲಾಯಿತು. ಮಂಗಳವಾರದಂದು 42 ಪ್ರಕರಣಗಳ ವಿಚಾರಣೆ ನಡೆಸಿ 33 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಒಟ್ಟು 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣ ಇತ್ಯರ್ಥ ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅಕ್ರಮ ಖಾತೆ ವರ್ಗಾವಣೆ, ಸುಳ್ಳು ದಾಖಲೆ ಸೃಷ್ಟಿ, ಭೂ ಸ್ವಾಧೀನ ಹಾಗೂ ಪರಿಹಾರ ವಿತರಣೆ, ಪೌತಿ ಖಾತೆ, ಖಾತೆ ಬದಲಾವಣೆ, ಲಂಚಕ್ಕೆ ಬೇಡಿಕೆ, ಸರ್ಕಾರಿ ಆದೇಶಗಳನ್ನು ನೀಡಲು ವಿಳಂಬ, ಜಮೀನು ಸರ್ವೇ ಕಾರ್ಯ, ನಿವೃತ್ತ ಸರ್ಕಾರಿ ನೌಕರರ ಪಿಂಚಣಿ, ಕ್ರಯ ಪತ್ರ, ನೀರಿನ ಸಮಸ್ಯೆ, ಗಡಿ ಗುರುತಿಸುವಿಕೆ ಮುಂತಾದ ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ.
ಸಾರ್ವಜನಿಕರು ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಉಚಿತ ಕಾನೂನು ಸಲಹೆಗಾಗಿ ಜಿಲ್ಲಾ ಕಾನೂನು ಪ್ರಾಧಿಕಾರವನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.
ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರು ದೂರು ನೀಡಲು ಬಂದಾಗ ಗೌರವದಿಂದ ನಡೆಸಿಕೊಳ್ಳುವುದರ ಜೊತೆಗೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಇಲಾಖೆ ಮೇಲಿನ ನಂಬಿಕೆಯನ್ನು ಕಾಪಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸಾರ್ವಜನಿಕ ಸಮಸ್ಯೆಗಳಿಗೆ ಯಾವುದೇ ನಿರೀಕ್ಷೆಗಳಿಲ್ಲದೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು. ಕೆಲವು ಬಾರಿ ದೂರುದಾರರು ಹಾಗೂ ಎದುರುದಾರರು ಇಬ್ಬರಲ್ಲೂ ತಪ್ಪು ಕಂಡುಬರಬಹುದು. ಮುಂದೆ ತಪ್ಪುಗಳನ್ನು ಮಾಡದಂತೆ ಎಚ್ಚರವಹಿಸಬೇಕು ಎಂದು ಸರ್ಕಾರಿ ನೌಕರರಿಗೆ ಸೂಚಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಜಿಲ್ಲಾ ಮಟ್ಟದ ಅಧಿಕಾರಿಗಳು, ನೌಕರರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು.
ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಶಶಿಕಾಂತ್.ಬಿ.ಭಾವಿಕಟ್ಟಿ, ಉಪ ನಿಬಂಧಕರಾದ ಎಂ.ವಿ ಚನ್ನಕೇಶವ ರೆಡ್ಡಿ, ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ, ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕ ಪುರುಷೋತ್ತಮ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಶ್ರೀನಾಥ್. ಎಂ.ಜೋಶಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಲೋಕಾಯುಕ್ತ ಸಂಸ್ಥೆಯ ಸಿಬ್ಬಂದಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…