
ಕೊಟ್ಟಿಗೆಯಲ್ಲಿದ್ದ 9 ಕುರಿಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೇ ಮರಿ ಸೇರಿ 4 ಕುರಿಗಳು ಸಾವನ್ನಪ್ಪಿದ್ದು, 5 ಕುರಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ರೈತ ಲಕ್ಷ್ಮಿನಾರಾಯಣಪ್ಪ ಎಂಬುವವರ ಕುರಿಗಳ ಮೇಲೆ ನರಿಗಳು ದಾಳಿ ನಡೆಸಿ ಬಲಿ ಪಡೆದಿವೆ.

ಕುರಿಗಳ ಮೇಲೆ ಚಿರತೆ ದಾಳಿ ನಡೆಸಿದ್ದರಿಂದ ರೈತನಿಗೆ ಸುಮಾರು 50 ಸಾವಿರಕ್ಕೂ ಹೆಚ್ಚು ನಷ್ಟ ಉಂಟಾಗಿದ್ದು, ರೈತ ಲಕ್ಷ್ಮಿನಾರಾಯಣಪ್ಪ ಸಂಕಷ್ಟದಲ್ಲಿದ್ದಾನೆ.

ಈ ಭಾಗದಲ್ಲಿ ಹಲವು ಬಾರಿ ಚಿರತೆಯು ಜಾನುವಾರುಗಳ ಮೇಲೆ ದಾಳಿ ನಡೆಸುತ್ತಲೇ ಬಂದಿದ್ದು, ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅರಣ್ಯ ಇಲಾಖೆ ನಿರ್ಲಕ್ಷ್ಯತನಕ್ಕೆ ರೈತರು ಸಾಕಷ್ಟು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಇನ್ನಾದರೂ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಕಾಡಿನಿಂದ ನಾಡಿಗೆ ಬಂದು ಸಾಕಷ್ಟು ಅವಾಂತರ ಸೃಷ್ಟಿಸುತ್ತಿರುವ ಕಾಡು ಪ್ರಾಣಿಗಳನ್ನು ಸೆರೆ ಹಿಡಿದು ಬೇರೆ ಕಡೆ ಬಿಡಬೇಕೆಂದು ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಯುವಕ ರವಿಕುಮಾರ್ ಆಗ್ರಹಿಸಿದರು.