ರಾಜ್ಯ ಸರಕಾರವು 9 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಡಾ.ಕೆ.ಎನ್.ಅನುರಾಧಾ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿ.ಪಂ ಸಿಇಓ ಆಗಿ ಮೂರು ತಿಂಗಳ ಹಿಂದೆ ಜಿಲ್ಲೆಗೆ ಬಂದಿದ್ದ 2019ರ ಬ್ಯಾಚ್ ನ ವರ್ಣೀತ್ ನೇಗಿ ಅವರನ್ನು ಕೊಡಗು ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಂ.ಗ್ರಾ.ಜಿಲ್ಲೆಯ ನೂತನ ಸಿಇಓ ಆಗಿ ನೇಮಕಗೊಂಡಿರುವ ಡಾ.ಕೆ.ಎನ್.ಅನುರಾಧ ಅವರು ಈ ಹಿಂದೆ ತುಮಕೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ರೇಷ್ಮೆ ಇಲಾಖೆ ನಿರ್ದೇಶಕಿಯಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸಿದ್ದರು.
ಆಯುಷ್ ಇಲಾಖೆಯ ಆಯುಕ್ತ ಜೆ.ಮಂಜುನಾಥ್ ಅವರನ್ನು ಸರ್ವೆ ಸೆಟಲ್ಮೆಂಟ್ ಹಾಗೂ ಭೂ ದಾಖಲೆಗಳ ಆಯುಕ್ತರಾಗಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ನಿರ್ದೇಶಕಿ ಸಿ.ಸತ್ಯಭಾಮಾ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ನೋಂಗ್‍ಜೈ ಮುಹಮ್ಮದ್ ಅಲಿ ಅಕ್ರಮ್ ಶಾ ಅವರನ್ನು ಹೊಸಪೇಟೆ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾ ಬಸವಂತಪ್ಪ ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತೆ ಸಿ.ಟಿ.ಶಿಲ್ಪಾ ನಾಗ್ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ, ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯಾಗಿ, ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಎಚ್.ವಿ.ದರ್ಶನ್ ಅವರನ್ನು ಐಟಿ ಮತ್ತು ಬಿಟಿ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…