9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಡಾ.ಕೆ.ಎನ್.ಅನುರಾಧಾ ನೇಮಕ

ರಾಜ್ಯ ಸರಕಾರವು 9 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಡಾ.ಕೆ.ಎನ್.ಅನುರಾಧಾ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರು ಗ್ರಾಮಾಂತರ ಜಿ.ಪಂ ಸಿಇಓ ಆಗಿ ಮೂರು ತಿಂಗಳ ಹಿಂದೆ ಜಿಲ್ಲೆಗೆ ಬಂದಿದ್ದ 2019ರ ಬ್ಯಾಚ್ ನ ವರ್ಣೀತ್ ನೇಗಿ ಅವರನ್ನು ಕೊಡಗು ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಬೆಂ.ಗ್ರಾ.ಜಿಲ್ಲೆಯ ನೂತನ ಸಿಇಓ ಆಗಿ ನೇಮಕಗೊಂಡಿರುವ ಡಾ.ಕೆ.ಎನ್.ಅನುರಾಧ ಅವರು ಈ ಹಿಂದೆ ತುಮಕೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ರೇಷ್ಮೆ ಇಲಾಖೆ ನಿರ್ದೇಶಕಿಯಾಗಿ, ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸಿದ್ದರು.

ಆಯುಷ್ ಇಲಾಖೆಯ ಆಯುಕ್ತ ಜೆ.ಮಂಜುನಾಥ್ ಅವರನ್ನು ಸರ್ವೆ ಸೆಟಲ್ಮೆಂಟ್ ಹಾಗೂ ಭೂ ದಾಖಲೆಗಳ ಆಯುಕ್ತರಾಗಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ನಿರ್ದೇಶಕಿ ಸಿ.ಸತ್ಯಭಾಮಾ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ನೋಂಗ್‍ಜೈ ಮುಹಮ್ಮದ್ ಅಲಿ ಅಕ್ರಮ್ ಶಾ ಅವರನ್ನು ಹೊಸಪೇಟೆ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.

ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾ ಬಸವಂತಪ್ಪ ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತೆ ಸಿ.ಟಿ.ಶಿಲ್ಪಾ ನಾಗ್ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ, ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯಾಗಿ, ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಎಚ್.ವಿ.ದರ್ಶನ್ ಅವರನ್ನು ಐಟಿ ಮತ್ತು ಬಿಟಿ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

14 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

20 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

24 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

2 days ago