90 ವರ್ಷದ ತಾತನಿಗೆ ಹೊಸ ಜೀವ- ರೋಬೋಟಿಕ್ ಶಸ್ತ್ರಚಿಕಿತ್ಸೆ ತಂದ ಹೊಸ ಆಶಾಕಿರಣ

ಬೆಂಗಳೂರು, ವೈಟ್‌ ಫಿಲ್ದ್‌ : ಮಾನವೀಯತೆ ಮತ್ತು ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನದ ಸಹಾಯದಿಂದ 90 ವರ್ಷದ ವೃದ್ದನಿಗೆ ಮರು ಜೀವ ನೀಡಲಾಯಿತು . ವೃದ್ದನಿಗೆ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಗಂಭೀರ ಪಿತ್ತಕೋಶದ ಸೋಂಕನ್ನು ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಹಾಯದಿಂದ, ಶಸ್ತ್ರಚಿಕಿತ್ಸೆ ನಡೆಸಿ ಸಂಪೂರ್ಣವಾಗಿ ಗುಣಮುಖ ಮಾಡಲಾಯಿತು.

ಕಳೆದ ಒಂದು ತಿಂಗಳಿನಿಂದ ಹೊಟ್ಟೆನೋವು ಮತ್ತು ವಾಂತಿಯ ತೊಂದರೆಗಳಿಂದ ಬಳಲುತ್ತಿದ್ದ ವೃದ್ಧರನ್ನು ವೈಟ್‌ ಫೀಲ್ದ್‌ ನಲ್ಲಿರುವ ಮೆಡಿಕವರ್‌ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಎಲ್ಲಾ ರೀತಿಯ ತಪಾಸಣೆಗಳನ್ನು ಮಾಡಿದ ಬಳಿಕ ವೃದ್ದನಿಗೆ ಕಿಡ್ನಿ ಸ್ಟೋನ್‌ ನಿಂದಾಗಿ ಪಿತ್ತಕೋಶದ ರಂಧ್ರ ಮತ್ತು ಗ್ಯಾಂಗ್ರೀನ್ ಸೋಂಕು ಕಂಡುಬಂದಿತ್ತು . ತಕ್ಷಣ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಾಗುವ ಪರಿಸ್ಥಿತಿ ಇತ್ತು.

ಅಲ್ಲದೇ ವೃದ್ದನೂ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದು ಮಾತ್ರವಲ್ಲದೇ ವಯಸ್ಸಿನ ಆಧಾರದಲ್ಲಿ ಶಸ್ತ್ರಚಿಕಿತ್ಸೆ ಅಪಾಯಕರವಾಗಿದ್ದರೂ, ಕನ್ಸಲ್ಟೆಂಟ್ ರೋಬೋಟಿಕ್ ಮತ್ತು ಜನರಲ್ ಸರ್ಜನ್ ಡಾ. ಜಾವೇದ್ ಹುಸೇನ್ ಅವರ ನೇತೃತ್ವದಲ್ಲಿ ವೈದ್ಯಕೀಯ ತಂಡವು ಡಾ ವಿನ್ಸಿ ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಬಳಸಿ ಶಸ್ತ್ರಚಿಕಿತ್ಸೆ ನಡೆಸಿದರು..

“90 ವರ್ಷದಲ್ಲಿ ಪ್ರತಿಯೊಂದು ಕ್ಷಣವೂ ಅಮೂಲ್ಯ. ಆದರೆ ರೋಬೋಟಿಕ್ ತಂತ್ರಜ್ಞಾನವು ನಮಗೆ ನಿಖರತೆ ಮತ್ತು ಸುರಕ್ಷತೆ ನೀಡಿತು,” ಎಂದು ಡಾ. ಜಾವೇದ್ ಹುಸೇನ್ ಹೇಳಿದರು.

ಈ ಘಟನೆ ಕೇವಲ ವೈದ್ಯಕೀಯ ಸಾಧನೆಯಲ್ಲ – ವಯಸ್ಸು ಅಡೆತಡೆ ಆಗದಂತೆ ಆಧುನಿಕ ರೋಬೋಟಿಕ್ ತಂತ್ರಜ್ಞಾನವು ಜೀವ ಉಳಿಸುವಲ್ಲಿ ಮಾಡಬಹುದಾದ ಅದ್ಭುತದ ಸಾಕ್ಷ್ಯವಾಗಿದೆ.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

5 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

10 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

13 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

24 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

1 day ago