ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾದಕವಸ್ತುಗಳ ವ್ಯಾಪಾರದಲ್ಲಿ ತೊಡಗಿಸಿಕೊಂಡಿದ್ದ ಆಫ್ರಿಕನ್ ಮೂಲದ ವ್ಯಕ್ತಿಯನ್ನು ಸಿಸಿಬಿ (ಸೆಂಟ್ರಲ್ ಕ್ರೈಂ ಬ್ರಾಂಚ್) ಪೊಲೀಸರು ಬಂಧಿಸಿ, ಬಂಧಿತನಿಂದ 5 ಕೆಜಿ ಎಂಡಿಎಂಎ ತಯಾರಿಕೆಗೆ ಬಳಸಲಾದ ವಿವಿಧ ಕಚ್ಚಾ ವಸ್ತುಗಳು ಮತ್ತು ರಾಸಾಯನಿಕಗಳ ಜೊತೆಗೆ ಸುಮಾರು 10 ಕೋಟಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು “ಮಾದಕ ವಸ್ತುಗಳ ಮಾರಾಟ ಜಾಲದ” ಪ್ರಕರಣಗಳ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ತಿಳಿಸಿದ್ದಾರೆ.
ಆರೋಪಿಗಳು ಈ ಎಂಡಿಎಂಎ ವಸ್ತುಗಳನ್ನು ಉತ್ಪಾದಿಸಲು ಮತ್ತು ಮಾರುಕಟ್ಟೆಯಲ್ಲಿ ವಿತರಿಸಲು ಪ್ರಯೋಗಾಲಯವನ್ನು ಸ್ಥಾಪಿಸಿಕೊಂಡಿದ್ದರು. ಇದನ್ನು ಬೆಂಗಳೂರು ನಗರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದಾರೆ ಎಂಬ ಮಾಹಿತಿಯನ್ನ ತಿಳಿಸಿದ್ದಾರೆ.