ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯಗಳು ಈ ಕೆಳಕಂಡಂತಿವೆ
ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಎಲ್ಲಾ ಸಗಟು ಗೋದಾಮುಗಳಿಗೆ ರೂ. 12 ಕೋಟಿ ವೆಚ್ಚದಲ್ಲಿ ಸಿ.ಸಿ.ಟಿ.ವಿ ಅಳವಡಿಕೆಗೆ ಕೆ.ಟಿ.ಟಿ.ಪಿ ಕಾಯ್ದೆಯನ್ವಯ ಟೆಂಡರ್ ಕರೆಯಲು ನಿರ್ಧಾರ.
* ರೂ. 44 ಕೋಟಿ ವೆಚ್ಚದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಲೋಕಲ್ ಪ್ಲಾನಿಂಗ್ ಏರಿಯಾ ವ್ಯಾಪ್ತಿಯಲ್ಲಿನ ನಂಜನಗೂಡು ತಾಲ್ಲೂಕು ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ ಗ್ರಾಮಗಳ ಅಭಿವೃದ್ಧಿ ಕಾರ್ಯಗಳು ಮತ್ತು ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಅನುಷ್ಠಾನಕ್ಕೆ ತೀರ್ಮಾನ.
* ಗದಗ – ಬೆಟಗೇರಿ ನಗರಸಭೆಗೆ ಅಮೃತ 2.0 ಯೋಜನೆಯಡಿ ಅಂದಾಜು ರೂ. 34 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಯೋಜನೆ ಅನುಷ್ಠಾನಕ್ಕೆ ಅನುಮತಿ.
* 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯದ ಆಯ್ದ 17 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪರಿಸರ ಪರಿಹಾರ ನಿಧಿಯಡಿ ರೂ. 750 ಕೋಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆ ನಿರ್ಮಾಣ ಹಾಗೂ ಉನ್ನತೀಕರಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ.
* ಪ್ರಸಕ್ತ ಸಾಲಿನಲ್ಲಿ ದೈಹಿಕ ವಿಕಲಚೇತನರಿಗೆ ರೂ. 36 ಕೋಟಿ ಅಂದಾಜು ವೆಚ್ಚದಲ್ಲಿ 4,000 ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧಾರ.
* ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ 4 ಲಕ್ಷ ಮೆಟ್ರಿಕ್ ಟನ್ ರಾಗಿ ಸಂಗ್ರಹಿಸಲು ಅಗತ್ಯವಿರುವ 80 ಲಕ್ಷ ಗೋಣಿಚೀಲಗಳ ಖರೀದಿಗೆ ರೂ. 76 ಕೋಟಿ ಅನುದಾನ ಒದಗಿಸಲು ಸಮ್ಮತಿ.