ತಾಲೂಕಿನ ಪ್ರಸಿದ್ಧ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿಯಲ್ಲಿ 53,22,603 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಇಂದು ನಡೆದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಕಾಣಿಕೆ ಹಣವನ್ನು ಎಣಿಕೆ ಮಾಡಲಾಯಿತು.
ಹುಂಡಿ ಎಣಿಕೆ ಕಾರ್ಯದಲ್ಲಿ 53 ಲಕ್ಷ ನಗದು, 2ಗ್ರಾಂ. ಚಿನ್ನ, 1ಕೆ.ಜಿ.500 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಡಿ.ನಾಗರಾಜ್, ಮುಜರಾಯಿ ತಹಶಿಲ್ದಾರ್ ಜೆ.ಜೆ.ಹೇಮಾವತಿ, ಪ್ರಧಾನ ಅರ್ಚಕ ನಾಗೇಂದ್ರ ಶರ್ಮ, ದೇವಾಲಯದ ನಂಜಪ್ಪ, ಇಂಡಿಯನ್ ಓವರ್ ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ದೇವಾಲಯದ ಸಿಬ್ಬಂದಿ ಭಾಗವಹಿಸಿದ್ದರು.