ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು,ಪದವಿ/ಸ್ನಾತಕೋತ್ತರ ವಿಭಾಗಗಳ ವಿದ್ಯಾರ್ಥಿಗಳಿಗೆ ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.
ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕೊಂಗಾಡಿಯಪ್ಪ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೀನಾ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳ ಪ್ರಬಂಧಗಳನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಲಾಗಿತ್ತು. ಮೂರು ವಿಭಾಗಗಳಲ್ಲಿ ಪ್ರತ್ಯೇಕವಾಗಿ ಪ್ರಥಮ ಸ್ಥಾನ-31,000, ದ್ವಿತೀಯ-21000 ಹಾಗೂ ತೃತೀಯ-11000 ರೂ.ಗಳ ನಗದು ಪುರಸ್ಕಾರ ನೀಡಲಾಗುತ್ತಿದೆ.
ಗಾಂಧೀಜಿಯವರ ಸಾಮಾಜಿಕ, ಆರ್ಥಿಕ, ಸ್ವರಾಜ್ ಚಿಂತನೆಗಳು, ಸತ್ಯ, ಅಹಿಂಸೆ ತತ್ವಗಳು, ಜಾತ್ಯಾತೀತ ನಿಲುವುಗಳು, ಸೌಹಾರ್ದತೆ,ಸ್ವಾವಲಂಬನೆಯ ಬದುಕು, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮತ್ತಿತರ ವಿಷಯಗಳ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು.
ವಿಜೇತರಿಗೆ ನಗದು ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.