ವಿಶ್ವಕಪ್ ಟೂರ್ನಿ ಮುಕ್ತಾಯವಾಗಿದ್ದು ಚಾಂಪಿಯನ್ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ತಂಡ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿ ನಡೆಯಲಿದ್ದು ಹಿರಿಯ ಆಟಗಾರರು ವಿಶ್ರಾಂತಿ ಪಡೆದಿರುವುದರಿಂದ ಬಿಸಿಸಿಐ ಸೂರ್ಯ ಕುಮಾರ್ ಯಾದವ್ ಗೆ ನಾಯಕತ್ವ ಪಟ್ಟ ಕಟ್ಟಿದೆ.
ಹಿರಿಯ ಆಟಗಾರರಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಅಲ್ ರೌಂಡರ್ ರವೀಂದ್ರ ಜಡೇಜಾ, ವೇಗಿಗಳಾದ ಜಸ್ಪ್ರಿತ್ ಬುಮ್ರಾ, ಶಮಿ, ಸಿರಾಜ್ ಸೇರಿದಂತೆ ಹಲವರಿಗೆ ವಿಶ್ರಾಂತಿ ನೀಡಿದ್ದು ಯುವ ಆಟಗಾರರಿಗೆ ಅವಕಾಶ ನೀಡಿದೆ.
ಸರಣಿ ನವೆಂಬರ್ 23 ರಿಂದ ಆರಂಭವಾಗಲಿದ್ದು ಮೊದಲ ಪಂದ್ಯ ವಿಶಾಖಪಟ್ಟಣ, ಎರಡನೇ ಪಂದ್ಯ ನವೆಂಬರ್ 26ರಂದು ತಿರುವನಂತಪುರಂ, ಮೂರನೇ ಪಂದ್ಯ ನವೆಂಬರ್ 28 ರಂದು ಗುಹವಾಟಿ, ನಾಲ್ಕನೇ ಪಂದ್ಯ ಡಿಸೆಂಬರ್ 1 ರಂದು ರಾಯ್ಪುರ ಹಾಗೂ ಕೊನೆಯ ಹಾಗೂ 5 ನೇ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದೆ.
ತಂಡದ ವಿವರ: ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್ (ಉಪನಾಯಕ), ಇಶಾನ್ ಕಿಶನ್, ಯಶಸ್ವಿ ಜೈಸ್ವಾಲ್, ತಿಲಕ್ ವಮಾ೯, ರಿಂಕು ಸಿಂಗ್, ಜಿತೇಶ್ ಶರ್ಮಾ(ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಶಿವಂ ದುಬೆ, ರವಿ ಬಿಷ್ಣೋಯಿ, ಅಷ೯ದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಆವೇಶ್ ಖಾನ್ ಮತ್ತು ಮುಖೇಶ್ ಕುಮಾರ್ ಆಯ್ಕೆಯಾಗಿದ್ದಾರೆ.
ಕೊನೆಯ ಎರಡು ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ತಂಡವನ್ನು ಸೇರಲಿದ್ದು ಎರಡು ಪಂದ್ಯಗಳಿಗೆ ಉಪನಾಯಕನಾಗಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.