ತಾಲೂಕಿನ ಮೇಷ್ಟ್ರು ಮನೆ ಕ್ರಾಸ್ ಬಳಿ ಕ್ಯಾಂಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ತಲೆಗೆ ಪೆಟ್ಟಾಗಿರುವ ಕಾರಣ ತೀವ್ರ ರಕ್ತ ಸ್ರಾವದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ತಾಲೂಕಿನ ಸಾಸಲು ಹೋಬಳಿಯ ಗುಮ್ಮನಹಳ್ಳಿ ನಿವಾಸಿ ರವಿಚಂದ್ರ (28), ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿ.
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.