ಡಿ.3 ರಂದು ಜಿಲ್ಲಾಡಳಿತ ಭವನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲ‌ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಇವರ ಸಹಯೋಗದಲ್ಲಿ ಡಿಸೆಂಬರ್ 03 ರಂದು ಬೆಳಗ್ಗೆ 10.30 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ “ವಿಶ್ವ ವಿಕಲಚೇತನರ ದಿನಾಚರಣೆ – 2023” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಉದ್ಘಾಟನೆ ಮಾಡಲಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಘನ ಉಪಸ್ಥಿತಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಶಾಸಕರಾದ ಎಸ್.ರವಿ, ಎನ್.ನಾಗರಾಜು, ಅ.ದೇವೇಗೌಡ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್‌ ಕುಮಾರ್ ಬಚ್ಚೇಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀನಿವಾಸಯ್ಯ.ಎನ್, ಪಶುಸಂಗೋಪನಾ ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿಯ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ.ಫಾಹಿಂ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಜಯಲಕ್ಷ್ಮಮ್ಮ, ಉಪಾಧ್ಯಕ್ಷರಾದ ಪಿ.ಮುನಿರಾಜು ರವರು ಭಾಗವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಹಾಗೂ ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆಯ ಸಮಿತಿ ಅಧ್ಯಕ್ಷರಾದ ಅಮರೇಶ್.ಹೆಚ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ(ಪ್ರಭಾರ) ಅನಿತಾಲಕ್ಷ್ಮೀ.ಎಸ್ ಸೇರಿದಂತೆ ಜಿಲ್ಲೆಯ ಎಲ್ಲಾ ವಿಕಲಚೇತನರು, ಚುನಾಯಿತ ಪ್ರತಿನಿಧಿಗಳು ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಮಾಧ್ಯಮ ಪ್ರತಿನಿಧಿಗಳು, ಪ್ರಗತಿಪರ ಸಂಘಟನೆಗಳು, ಎಲ್ಲಾ ವಿವಿಧೋದ್ದೇಶ, ನಗರ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Leave a Reply

Your email address will not be published. Required fields are marked *