ಭಾರತ – ನ್ಯೂಜಿಲೆಂಡ್ ಏಕದಿನ ಸರಣಿ : ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ

ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ವರ್ಷದ ಆರಂಭದಲ್ಲಿ ತವರಿನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟಿ-ಟ್ವೆಂಟಿ ಸರಣಿಯನ್ನು ಗೆದ್ದು, ಮೂರು ಏಕದಿನ ಪಂದ್ಯಗಳ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ್ದ ಭಾರತ ತಂಡ ಬೌಲಿಂಗ್ ಹಾಗೂ ಬ್ಯಾಟಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡುತ್ತಿದ್ದು ಸರಣಿಯಲ್ಲಿ ಶುಭಾರಂಭ ಮಾಡುವ ನಿರೀಕ್ಷೆ ಇದೆ.

ಹಿರಿಯ ಆಟಗಾರ ಕೆ. ಎಲ್. ರಾಹುಲ್ ಹಾಗೂ ಆಲ್ ರೌಂಡರ್ ಅಕ್ಷರ್ ಪಟೇಲ್ ವೈಯಕ್ತಿಕ ಕಾರಣಗಳಿಂದ ಈ ಸರಣಿಗೆ ಲಭ್ಯರಾಗಿಲ್ಲ, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದ ಬಳಲುತ್ತಿದ್ದು ಸರಣಿಯಿಂದ ಹಿಂದೆ ಸರಿದಿದ್ದು ವಿಕೆಟ್ ಕೀಪರ್ ಇಶಾನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಅಂತಿಮ ಹನ್ನೊಂದರಲ್ಲಿ ಅವಕಾಶ ಪಡೆದಿದ್ದಾರೆ.

ಇತ್ತೀಚೆಗಷ್ಟೇ ಪಾಕಿಸ್ತಾನ ವಿರುದ್ಧದ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಸರಣಿ ಜಯಿಸಿರುವ ಪ್ರವಾಸಿ ನ್ಯೂಜಿಲೆಂಡ್ ತಂಡ ಮತ್ತೊಮ್ಮೆ ಮಿಂಚುವ ವಿಶ್ವಾಸದಲ್ಲಿದೆ, ಸ್ಟಾರ್ ಆಟಗಾರರಾದ ಕೇನ್ ವಿಲಿಯಮ್ ಸನ್ ಹಾಗೂ ಅನುಭವಿ ಬೌಲರ್ ಟೀಮ್ ಸೌಥಿ ಅಲಭ್ಯರಾಗಿದ್ದು ಪ್ರವಾಸಿ ತಂಡ ಹೊಸ ಸಂಯೋಜನೆಯೊಂದಿಗೆ ಕಣಕ್ಕೆ ಇಳಿಯಲಿದೆ.

ನ್ಯೂಜಿಲೆಂಡ್ (ಅಂತಿಮXI): ಫಿನ್ ಅಲೆನ್, ಡೆವೊನ್ ಕಾನ್ವೇ, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (w/c), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಹೆನ್ರಿ ಶಿಪ್ಲಿ, ಮಿಚೆಲ್ ಸ್ಯಾಂಟ್ನರ್, ಲಾಕಿ ಫರ್ಗುಸನ್, ಬ್ಲೇರ್ ಟಿಕ್ನರ್

ಭಾರತ (ಅಂತಿಮ XI): ರೋಹಿತ್ ಶರ್ಮಾ(c), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್(w), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ

Leave a Reply

Your email address will not be published. Required fields are marked *