ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ವತಿಯಿಂದ ಡಿಸೆಂಬರ್ 20 ರಂದು ಬೆಳಗ್ಗೆ 9 ಗಂಟೆಗೆ ದೊಡ್ಡಬಳ್ಳಾಪುರ ಟೌನ್ ನ ಎಲ್ & ಟಿ ಫ್ಯಾಕ್ಟರಿ ಬಳಿಯ ವಿದ್ಯಾದಾನ್ ಶಾಲೆ ಮುಂಭಾಗದಲ್ಲಿರುವ ಲೋಟಸ್ ಅರೇನಾದಲ್ಲಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರ ವನ್ನು ಹಮ್ಮಿಕೊಳ್ಳಲಾಗಿದೆ.
ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಧೀರಜ್ ಮುನಿರಾಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಐಟಿ.ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆ, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ವಿಧಾನ ಪರಿಷತ್ ಶಾಸಕರಾದ ಎಸ್.ರವಿ, ಎನ್.ನಾಗರಾಜು, ಅ.ದೇವೇಗೌಡ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀನಿವಾಸಯ್ಯ.ಎನ್,ಕೊನಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಗಳ ಮಂಜುನಾಥ್, ಉಪಾಧ್ಯಕ್ಷರಾದ ಪುಷ್ಪ ಶಿವಕುಮಾರ್, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಪಶುಸಂಗೋಪನಾ ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ, ಜಿಲ್ಲಾ ಪಂಚಾಯಿತಿಯ ಆಡಳಿತಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ.ಫಾಹಿಂ, ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಾದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಪವನ್ ಕುಮಾರ್ ಮಾಲಪತಿ, ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೊಡ್ಡಬಳ್ಳಾಪುರ ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಕಾರ್ಯನಿರ್ವಾಹಕ ಅಧಿಕಾರಿ ಎನ್.ಮುನಿರಾಜು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.