ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಮತ್ತು ಕೆಜಿಎಫ್ ಖ್ಯಾತಿಯ ಡೈರೆಕ್ಟರ್ ಪ್ರಶಾಂತ್ ನೀಲ್ ಕಾಂಬಿನೇಷನ್, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಬಹುನಿರೀಕ್ಷಿತ ‘ಸಲಾರ್’ ಚಿತ್ರ ದೇಶದಾದ್ಯಂತ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ, ಆರು ಸಾವಿರಕ್ಕೂ ಅಧಿಕ ಬೆಳ್ಳಿ ಪರದೆಗಳ ಮೇಲೆ ತೆರೆಕಂಡಿದೆ. ಚಿತ್ರವನ್ನು 270 ಕೋಟಿಯಲ್ಲಿ ನಿರ್ಮಾಣ ಮಾಡಲಾಗಿದೆ.
‘ಸಲಾರ್’ ಮೊದಲ ಶೋನಿಂದಲೇ ಚಿತ್ರಕ್ಕೆ ಪ್ರೇಕ್ಷಕರಿಂದ ಪಾಸಿಟಿವ್ ರೆಸ್ಪಾನ್ಸ್ ಸಿಗುತ್ತಿದೆ. ಬೆಳಗ್ಗೆಯಿಂದಲೇ ಅಭಿಮಾನಿಗಳು ಚಿತ್ರವನ್ನು ನೋಡಲು ಸಾಲುಗಟ್ಟಿ ನಿಂತಿದ್ದಾರೆ.
ಇಬ್ಬರು ಬಾಲ್ಯ ಸ್ನೇಹಿತರ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗಿದೆ. ಸಿನಿಮಾದಲ್ಲಿ ಪ್ರಭಾಸ್ ಅವರು ದೇವ ಹೆಸರಿನಲ್ಲಿ ಕಾಣಿಸಿಕೊಳ್ಳುತ್ತಾರೆ. ಪೃಥ್ವಿರಾಜ್ ರಾಜ ಮನ್ನಾರ್ ಆಗಿ ಅಭಿನಯಿಸಿದ್ದಾರೆ. ಸಿನಿಮಾವೆಲ್ಲ ಪ್ರಭಾಸ್ ಮತ್ತು ಪೃಥ್ವಿರಾಜ್ ಮಧ್ಯೆ ಇದೆ. ಜೊತೆಗೆ ಕೆಲ ಘಟನೆಗಳಿಂದ ಇಬ್ಬರು ದೂರವಾಗಿ ಶತ್ರುಗಳಾಗುವುದನ್ನು ನಿರ್ದೇಶಕ ಪ್ರಶಾಂತ್ ನೀಲ್ ಕಟ್ಟಿಕೊಟ್ಟಿದ್ದಾರೆ. ಇನ್ನು, ಸಲಾರ್ ಸಿನಿಮಾ ನೋಡಿದ ಸಿನಿ ಪ್ರೇಮಿಗಳಂತು ಫುಲ್ ಫಿದಾ ಆಗಿದ್ದಾರೆ.