ದೇವನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುವ ವಿಚಾರ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಎಂದು ಮಾಜಿ ಸಂಸದ ಕೆ.ಹೆಚ್.ಮುನಿಯಪ್ಪ ಹೇಳಿದರು.
ಟಿಕೆಟ್ ಕೊಡೊದು ಬಿಡೊದು ಪಕ್ಷ ತೀರ್ಮಾನ ಮಾಡುತ್ತದೆ, ನಾವು ಪಕ್ಷ ಗೆಲುವಿಗೆ ಕೆಲಸ ಮಾಡುತ್ತಿದ್ದೇವೆ ಟಿಕೆಟ್ ಗಾಗಿ ಅಲ್ಲ. ನಮ್ಮ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರೋದು, ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸಿದ್ದರಾಮಯ್ಯನವರನ್ನು ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಗೆಲ್ಲಿಸುತ್ತೇವೆ ಎಂದು ತಿಳಿಸಿದರು.
ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೆದ್ದೆ ಗೆಲ್ಲುತ್ತಾರೆ. ನಾವೆಲ್ಲಾ ಒಟ್ಟಿಗೆ ಕೆಲಸ ಮಾಡಿ ಅವರನ್ನು ಜಯಶೀಲರನ್ನಾಗಿ ಮಾಡುತ್ತೇವೆ.ಅವರ ಸರಕಾರದಲ್ಲಿ ಅತ್ಯಂತ ಜನಪ್ರಿಯ ಯೋಜನೆಗಳನ್ನು ನೀಡಿದ್ದಾರೆ. ಅವರನ್ನು ಜನರು ಗೆಲ್ಲಿಸುತ್ತಾರೆ.ಯಾವುದೇ ಆತಂಕವಿಲ್ಲದೆ ಒಂದಾಗಿ ಸಿದ್ದರಾಮಯ್ಯ ಅವರನ್ನು ಗೆಲ್ಲಿಸಿ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರುತ್ತೇವೆ ಎಂದರು.
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಜನತೆ ನನ್ನ ಮೇಲೆ ಅಭಿಮಾನ ಇಟ್ಟಿರೋದಕ್ಕೆ ನಾನು ಚಿರಋಣಿ ಎಂದು ತಿಳಿಸಿದರು.