ಕಾರು ಹಾಗೂ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಸರಿ ಸುಮಾರು 3:30ರ ಸಮಯದಲ್ಲಿ ತಾಲೂಕಿನ ತಪಸೀಹಳ್ಳಿ ಸಮೀಪ ನಡೆದಿದೆ.
ಬೆಂಗಳೂರಿನಿಂದ ಗೌರಿಬಿದನೂರು ಕಡೆ ಬರುತ್ತಿದ್ದ ಕಾರಿಗೆ ಗೌರಿಬಿದನೂರು ಕಡೆಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಅಸುನೀಗಿದ್ದಾರೆ.
ಮೃತರನ್ನು ಗೌರಿಬಿದನೂರು ತಾಲೂಕಿನ ಕೆಂಕರೆ ಗ್ರಾಮದ ಭರತ್ ಕುಮಾರ್ (24), ನಿತಿನ್ (19) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಕೂಡಲೇ 112 ಪೊಲೀಸ್ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ಮಾಡಿ ಶವಗಳನ್ನು ಆಂಬ್ಯುಲೆನ್ಸ್ ಮೂಲಕ ಶವಗಾರಕ್ಕೆ ರವಾನಿಸಲಾಗಿದೆ.
ಲಾರಿಯ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.