ಕರ್ನಾಟಕದ ಹೆಮ್ಮೆಯ ಶಿಲ್ಪಿ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಶ್ರೀ ರಾಮನ ಪ್ರತಿಮೆ ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲು ಆಯ್ಕೆಯಾಗಿದೆ.
ಈ ಹಿಂದೆ ಕೇದಾರನಾಥದ ಶ್ರೀ ಶಂಕರಾಚಾರ್ಯರ ಪ್ರತಿಮೆ, ಇಂಡಿಯಾ ಗೇಟ್ ಬಳಿಯ ನೇತಾಜಿ ಸುಭಾಷ್ ಚಂದ್ರ ಬೋಸರ ಪ್ರತಿಮೆಗಳನ್ನು ಕೆತ್ತಿರುವ ಮೈಸೂರು ಮೂಲದ ಪ್ರಖ್ಯಾತ ಶಿಲ್ಪಿ ಶ್ರೀ ಅರುಣ್ ಯೋಗಿರಾಜ್ ಅವರು ಈಗ ಆಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ರಾಮಮಂದಿರದ ವಿಗ್ರಹದ ಕೆತ್ತನೆಯನ್ನೂ ನೆರವೇರಿಸಿರುವುದು ಕನ್ನಡಿಗರಿಗೆ ನಿಜಕ್ಕೂ ಹೆಮ್ಮಯ ಸಂಗತಿ ಎಂದು ಗಣ್ಯರು ಅಭಿನಂದಿಸಿದ್ದಾರೆ.