ಇಂಡಿಯಾ ಸ್ಕಿಲ್ಸ್  ಕರ್ನಾಟಕ 2023-24ರ ಸ್ಪರ್ಧೆಗೆ ಆಸಕ್ತ ಅಭ್ಯರ್ಥಿಗಳು ನೋಂದಾಯಿಸಿ

ವರ್ಲ್ಡ್ ಸ್ಕಿಲ್ಸ್ ಕಾಂಪಿಟೇಷನ್ ಎರಡು ವರ್ಷಗಳಿಗೊಮ್ಮೆ ಪ್ರಪಂಚದ ಆಯಕಟ್ಟಿನ ಸ್ಥಳಗಳಲ್ಲಿ, ದೇಶಗಳಲ್ಲಿ ಆಯೋಜಿಸಲಾಗುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದ್ದು, 75 ಕ್ಕಿಂತಲೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ.

22 ವರ್ಷದೊಳಗಿನ 1000ಕ್ಕೂ ಹೆಚ್ಚು ಯುವಜನತೆ, 57ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಅತಿದೊಡ್ಡ ವೃತ್ತಿಪರ ಶಿಕ್ಷಣ ಮತ್ತು ಕೌಶಲ್ಯ ಶ್ರೇಷ್ಠತೆಯ ಕಾರ್ಯಕ್ರಮವಾಗಿರುತ್ತದೆ.

2024ರಲ್ಲಿ ವಿಶ್ವ ಕೌಶಲ್ಯ ಸ್ಪರ್ಧೆಯು ಫ್ರಾನ್ಸ್ ದೇಶದ ಲಿಯಾನ್‌ನಲ್ಲಿ ನಡೆಯಲಿದೆ. ಇದಕ್ಕೆ ಪೂರ್ವ ತಯಾರಿಯಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (KSDC) “ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24” ಸ್ಫರ್ಧೆಯನ್ನು ಪ್ರಾರಂಭಿಸಿದೆ.

ಕೌಶಲ್ಯ ಸ್ಪರ್ಧೆಗಳಲ್ಲಿ ಗೆಲುವು ಸಾಧಿಸಿದವರಿಗೆ ನಿರಂತರ ತರಬೇತಿಯನ್ನು ಒದಗಿಸಿ ಪ್ರಾದೇಶಿಕ ಮತ್ತು ರಾಷ್ಟ್ರ ಮಟ್ಟದಲ್ಲಿ ಗೆಲುವು ಸಾಧಿಸಲು ಹಾಗೂ ಭಾರತವನ್ನು ಜಾಗತಿಕ ಮಟ್ಟದಲ್ಲಿ ಪ್ರತಿನಿಧಿಸಲು ವೇದಿಕೆಯನ್ನು ಕಲ್ಪಿಸಿಕೊಡಲಾಗುವುದು.

ಕ್ರ.ಸಂ 1 ರಿಂದ 40ರ ವರೆಗಿನ ಕೌಶಲ್ಯಗಳಿಗೆ ಸ್ಪರ್ಧೆಗಳಲ್ಲಿ  ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-2002ರ ನಂತರ ಜನಿಸಿರಬೇಕು. ಕ್ರ.ಸಂ 41 ರಿಂದ 57ರ ಕೌಶಲ್ಯ ಸ್ಪರ್ಧೆಗಳಲ್ಲಿ  ಭಾಗವಹಿಸಲು ಅಭ್ಯರ್ಥಿಗಳು ಜನವರಿ-1-1999ರ ನಂತರ ಜನಿಸಿರಬೇಕು.

ವರ್ಲ್ಡ್ ಸ್ಕಿಲ್ಸ್ ಮತ್ತು ಇಂಡಿಯಾ ಸ್ಕಿಲ್ಸ್ ಕರ್ನಾಟಕ 2023-24 ಕುರಿತು ಸಂಪೂರ್ಣ ಮಾಹಿತಿಗಾಗಿ www.skillindiadigital.gov.in ಗೆ ಭೇಟಿ ನೀಡಬಹುದಾಗಿದೆ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜನವರಿ 07 ಕೊನೆಯ ದಿನಾಂಕವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂ ಸಂ 18005999918ನ್ನು ಸಂಪರ್ಕಿಸುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳ ನೋಂದಣಿ ಹಾಗೂ ಭಾಗವಹಿಸುವ ಅವಕಾಶವು ಸಂಪೂರ್ಣವಾಗಿ ಉಚಿತವಾಗಿರುತ್ತದೆ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *