ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ನಟರಾಜು ರವರು ಪದೋನ್ನತಿ ಹೊಂದಿದ್ದು, ಪ್ರಸ್ತುತ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶನಾಲಯದಲ್ಲಿ ಜಂಟಿ ನಿರ್ದೇಶಕರಾಗಿ ಕರ್ತವ್ಯವನ್ನು ವಹಿಸಿಕೊಂಡಿರುತ್ತಾರೆ.
ಇದರ ಅಂಗವಾಗಿ ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬೀಳ್ಕೊಡುಗೆ ಮತ್ತು ಅಭಿನಂದನಾ ಸಮಾರಂಭವನ್ನು ನಗರದ ಕೆಎಂಎಫ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಭಾರ ಉಪನಿರ್ದೇಶಕರಾದ ಅನಿತಾ ಲಕ್ಷ್ಮಿ, ಜಿಲ್ಲಾ ವಿಕಲಚೇತನರ ಸಬಲೀಕರಣ ಇಲಾಖೆ ಅಧಿಕಾರಿ ಜಗದೀಶ ಎನ್. ಎಂ, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರಾದ ಸುಬ್ಬರಾವ್, ನಾಲ್ಕು ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿಗಳು, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು ಹಾಗೂ ಇಲಾಖೆಯ ಸಿಬ್ಬಂದಿ ಹಾಜರಿದ್ದರು.