ಹಿಟ್ ಅಂಡ್ ರನ್ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಗರದ ಬಸವ ಭವನ ಬಳಿಯ ಡೇರಿ ಮುಂಭಾಗ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಸುಮಾರು 1-30ರ ಸಮಯದಲ್ಲಿ ನಡೆದಿದೆ.
ನಗರದ ರಾಜೀವ್ ಗಾಂಧಿ ಬಡಾವಣೆಯ 2ನೇ ಹಂತ, ಗಂಗಧಾರಪುರ ಬಡಾವಣೆ ನಿವಾಸಿ ಶಿವಶಂಕರಪ್ಪ (54)ಮೃತಪಟ್ಟ ವ್ಯಕ್ತಿ ಎನ್ನಲಾಗಿದೆ.
ಶಿವಶಂಕರಪ್ಪ ಅವರು ಯಲಹಂಕದ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದು, ರೇಷನ್ ಕಾರ್ಡ್ ಗೆ ಹೆಬ್ಬೆಟ್ಟು ನೀಡಲು ಯಲಹಂಕದಿಂದ ದೊಡ್ಡಬಳ್ಳಾಪುರದ ಮನೆಗೆ ಬರುತ್ತಿದ್ದರು.
ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಬಸ್ ಇಳಿದು ಮನೆಗೆ ನಡೆದುಕೊಂಡು ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಅಪಘಾತ ಎಸಗಿದ ವಾಹನ ಇನ್ನೂ ಪತ್ತೆಯಾಗಿಲ್ಲ. ಘಟನೆಗೆ ಸಂಬಂಧಿಸಿದಂತೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.